AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 09 January: ಭಾರತದಲ್ಲಿ ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.40 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 09 January: ಭಾರತದಲ್ಲಿ ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 09, 2024 | 4:00 AM

Share

ಬೆಂಗಳೂರು, ಜನವರಿ 9: ಭಾರತದಲ್ಲಿ ಕಳೆದ ವಾರದಿಂದ ಆರಂಭವಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಇಳಿಕೆ ಈ ವಾರವೂ ಮುಂದುವರಿದಿದೆ. ಹಿಂದಿನ ಎರಡು ವಾರ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಈಗ ಕಡಿಮೆ ಆಗಿರುವುದು ಹೂಡಿಕೆದಾರರನ್ನು ಉತ್ತೇಜಿಸುತ್ತಿದೆ. ಕಳೆದ ಎಂಟು ದಿನಗಳಿಂದ 10 ಗ್ರಾಮ್​ನ 22 ಕ್ಯಾರಟ್ ಚಿನ್ನ 950 ರೂನಷ್ಟು ಇಳಿಕೆ ಆಗಿದೆ. ವಿದೇಶಗಳಲ್ಲಿ ಮೂರ್ನಾಲ್ಕು ವಾರಗಳಿಂದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 764 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,800 ರೂ
  • ಚೆನ್ನೈ: 58,300 ರೂ
  • ಮುಂಬೈ: 57,500 ರೂ
  • ದೆಹಲಿ: 57,950 ರೂ
  • ಕೋಲ್ಕತಾ: 57,800 ರೂ
  • ಕೇರಳ: 57,800 ರೂ
  • ಅಹ್ಮದಾಬಾದ್: 57,850 ರೂ
  • ಜೈಪುರ್: 57,950 ರೂ
  • ಲಕ್ನೋ: 57,950 ರೂ
  • ಭುವನೇಶ್ವರ್: 57,800 ರೂ

ಇದನ್ನೂ ಓದಿ: Farmers: ಪಿಎಂ ಕಿಸಾನ್ ಯೋಜನೆ; ರೈತರಿಗೆ ಸಿಗಲಿದೆ 8,000 ರೂ ಹಣ; ಕಂತುಗಳ ಸಂಖ್ಯೆ 4ಕ್ಕೆ ಏರಿಕೆ ಸಾಧ್ಯತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (54,113 ರುಪಾಯಿ)
  • ದುಬೈ: 2,302.50 ಡಿರಾಮ್ (52,072 ರುಪಾಯಿ)
  • ಅಮೆರಿಕ: 630 ಡಾಲರ್ (52,336 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,764 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,951 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,495 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,978 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,239 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,780 ರೂ
  • ಮುಂಬೈ: 7,640 ರೂ
  • ದೆಹಲಿ: 7,640 ರೂ
  • ಕೋಲ್ಕತಾ: 7,640 ರೂ
  • ಕೇರಳ: 7,780 ರೂ
  • ಅಹ್ಮದಾಬಾದ್: 7,640 ರೂ
  • ಜೈಪುರ್: 7,640 ರೂ
  • ಲಕ್ನೋ: 7,640 ರೂ
  • ಭುವನೇಶ್ವರ್: 7,780 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!