AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10th July: ಚಿನ್ನ ಮತ್ತೆ ಇಳಿಕೆ; ಬೆಳ್ಳಿಯೂ ಇಳಿಕೆ ಹಾದಿಯಲ್ಲಿ

Bullion Market 2024 July 10th: ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಇಳಿದಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 67,100 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 73,200 ರೂ ಇದೆ. ಬೆಳ್ಳಿ ಬೆಲೆಯೂ ಇಂದು ಇಳಿಕೆ ಆಗಿರುವುದು ವಿಶೇಷ.

Gold Silver Price on 10th July: ಚಿನ್ನ ಮತ್ತೆ ಇಳಿಕೆ; ಬೆಳ್ಳಿಯೂ ಇಳಿಕೆ ಹಾದಿಯಲ್ಲಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 10, 2024 | 5:00 AM

Share

ಬೆಂಗಳೂರು, ಜುಲೈ 10: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಕೂಡ ಇಂದು ಬುಧವಾರ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಇಳಿಕೆ ಆಗಿದೆ. ಕಳೆದ ಎರಡು ವಾರದಿಂದ ಚಿನ್ನದ ಬೆಲೆ ಇಳಿದಿರುವುದು ಇದು ಮೂರನೇ ಬಾರಿ ಮಾತ್ರವೇ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,390 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 945 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 939 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,100 ರೂ
  • ಚೆನ್ನೈ: 67,700 ರೂ
  • ಮುಂಬೈ: 67,100 ರೂ
  • ದೆಹಲಿ: 67,250 ರೂ
  • ಕೋಲ್ಕತಾ: 67,100 ರೂ
  • ಕೇರಳ: 67,100 ರೂ
  • ಅಹ್ಮದಾಬಾದ್: 67,150 ರೂ
  • ಜೈಪುರ್: 67,250 ರೂ
  • ಲಕ್ನೋ: 67,250 ರೂ
  • ಭುವನೇಶ್ವರ್: 67,100 ರೂ

ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಎಫ್ ಅಂಡ್ ಒ ವ್ಯವಹಾರಕ್ಕೆ ಕಡಿವಾಣ ಹಾಕಲು ಸೆಬಿ ಕ್ರಮ; ಹೊಸ ನಿಯಮಗಳು ಸದ್ಯದಲ್ಲೇ ಜಾರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,510 ರಿಂಗಿಟ್ (62,260 ರುಪಾಯಿ)
  • ದುಬೈ: 2,650 ಡಿರಾಮ್ (60,240 ರುಪಾಯಿ)
  • ಅಮೆರಿಕ: 725 ಡಾಲರ್ (60,530 ರುಪಾಯಿ)
  • ಸಿಂಗಾಪುರ: 1,001 ಸಿಂಗಾಪುರ್ ಡಾಲರ್ (61,890 ರುಪಾಯಿ)
  • ಕತಾರ್: 2,700 ಕತಾರಿ ರಿಯಾಲ್ (61,820 ರೂ)
  • ಸೌದಿ ಅರೇಬಿಯಾ: 2,730 ಸೌದಿ ರಿಯಾಲ್ (60,770 ರುಪಾಯಿ)
  • ಓಮನ್: 286 ಒಮಾನಿ ರಿಯಾಲ್ (62,020 ರುಪಾಯಿ)
  • ಕುವೇತ್: 214.40 ಕುವೇತಿ ದಿನಾರ್ (58,510 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,390 ರೂ
  • ಚೆನ್ನೈ: 9,900 ರೂ
  • ಮುಂಬೈ: 9,450 ರೂ
  • ದೆಹಲಿ: 9,450 ರೂ
  • ಕೋಲ್ಕತಾ: 9,450 ರೂ
  • ಕೇರಳ: 9,900 ರೂ
  • ಅಹ್ಮದಾಬಾದ್: 9,450 ರೂ
  • ಜೈಪುರ್: 9,450 ರೂ
  • ಲಕ್ನೋ: 9,450 ರೂ
  • ಭುವನೇಶ್ವರ್: 9,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ