ಬೆಂಗಳೂರು: ಏರಿಕೆ ನಿರೀಕ್ಷೆಯಲ್ಲಿದ್ದ ಚಿನ್ನದ ಬೆಲೆ (Gold Rates) ತುಸು ಇಳಿದಿದೆ. ಅಪರೂಪಕ್ಕೆ ಬೆಳ್ಳಿ ಬೆಲೆ ಸತತ ಏರಿಕೆ ಕಾಣುತ್ತಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: India vs China: ಎಮರ್ಜಿಂಗ್ ದೇಶಗಳ ಪೈಕಿ ಇಂಡಿಯಾ ಮಿಂಚು; ಹೂಡಿಕೆ ಆಕರ್ಷಣೆಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ