ಬೆಂಗಳೂರು: ಭಾರತದಲ್ಲಿ ವೀಕೆಂಡ್ ವೇಳೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೆ ಬೆಳ್ಳಿ ಬೆಲೆ (Gold and Silver Rates) ಏರಿಕೆಯಾಗಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ಬೆಳ್ಳಿ ಬೆಲೆ ಮೂರ್ನಾಲ್ಕು ದಿನ ಸತತ ಏರಿಕೆ ಕಂಡಿದ್ದು ವಿರಳ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇತ್ತಾದರೂ ಕಳೆದ ಕೆಲ ದಿನಗಳಿಂದ ಚಿನ್ನ ಗಣನೀಯವಾಗಿ ಬೆಲೆ ಹೆಚ್ಚಿಸಿಕೊಂಡಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಇನ್ನಷ್ಟು ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 55,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 14 July: ಇಂದು ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಕೋಕೋ ಮತ್ತು ಅಡಿಕೆ ದರ ಹೀಗಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ