Gold Silver Price on 17 July: ವಾರಪೂರ್ತಿ ಏರಿ ವೀಕೆಂಡ್​ನಲ್ಲಿ ಇಳಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಡೀಟೇಲ್ಸ್

Bullion Market 2023, July 17th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17 July: ವಾರಪೂರ್ತಿ ಏರಿ ವೀಕೆಂಡ್​ನಲ್ಲಿ ಇಳಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಡೀಟೇಲ್ಸ್
ಚಿನ್ನ

Updated on: Jul 17, 2023 | 5:09 AM

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಅಲ್ಪ ಇಳಿಕೆ ಕಂಡಿವೆ. ಕಳೆದ ವಾರ ಸತತವಾಗಿ ಏರಿಕೆ ಕಂಡಿದ್ದ ಈ ಎರಡು ಲೋಹಗಳ ಬೆಲೆ ಇದೀಗ ಸ್ವಲ್ಪ ತಗ್ಗಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಇನ್ನಷ್ಟು ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 55,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,680 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 17ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 768 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,000 ರೂ
  • ಚೆನ್ನೈ: 55,370 ರೂ
  • ಮುಂಬೈ: 55,000 ರೂ
  • ದೆಹಲಿ: 55,150 ರೂ
  • ಕೋಲ್ಕತಾ: 55,000 ರೂ
  • ಕೇರಳ: 55,000 ರೂ
  • ಅಹ್ಮದಾಬಾದ್: 55,050 ರೂ
  • ಜೈಪುರ್: 55,150 ರೂ
  • ಲಕ್ನೋ: 55,150 ರೂ
  • ಭುವನೇಶ್ವರ್: 55,000 ರೂ

ಇದನ್ನೂ ಓದಿTomato: ಕೆಜಿಗೆ 90 ಅಲ್ಲ, 80 ರೂಗೆ ಟೊಮೆಟೋ; ಇಂದಿನಿಂದಲೇ ಸರ್ಕಾರದಿಂದ ಮಾರಾಟ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,656 ರುಪಾಯಿ)
  • ದುಬೈ: 2192.50 ಡಿರಾಮ್ (48,992 ರುಪಾಯಿ)
  • ಅಮೆರಿಕ: 600 ಡಾಲರ್ (49,246 ರುಪಾಯಿ)
  • ಸಿಂಗಾಪುರ: 803 ಸಿಂಗಾಪುರ್ ಡಾಲರ್ (49,877 ರುಪಾಯಿ)
  • ಕತಾರ್: 2,260 ಕತಾರಿ ರಿಯಾಲ್ (50,946 ರೂ)
  • ಓಮನ್: 239 ಒಮಾನಿ ರಿಯಾಲ್ (51,040 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,203 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,680 ರೂ
  • ಚೆನ್ನೈ: 8,180 ರೂ
  • ಮುಂಬೈ: 7,750 ರೂ
  • ದೆಹಲಿ: 7,750 ರೂ
  • ಕೋಲ್ಕತಾ: 7,750 ರೂ
  • ಕೇರಳ: 8,180 ರೂ
  • ಅಹ್ಮದಾಬಾದ್: 7,750 ರೂ
  • ಜೈಪುರ್: 7,750 ರೂ
  • ಲಕ್ನೋ: 7,750 ರೂ
  • ಭುವನೇಶ್ವರ್: 8,180 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us