ಬೆಂಗಳೂರು, ಜುಲೈ 17: ಚಿನ್ನದ ಬೆಲೆ ಇಂದು ಬುಧವಾರ ಹೆಚ್ಚಳವಾದರೆ, ಬೆಳ್ಳಿ ಬೆಲೆ ತುಸು ಕಡಿಮೆ ಆಗಿದೆ. ಹಳದಿ ಲೋಹದ ಬೆಲೆ ಗ್ರಾಮ್ಗೆ 35 ರೂನಷ್ಟು ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 20 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ತುಸು ಏರಿಕೆ ಆಗಿದೆ. ಕಳೆದ ಎರಡು ವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯಗೊಂಡಿರಲಿಲ್ಲ. ಈ ವಾರವೂ ಅದೇ ಟ್ರೆಂಡ್ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,425 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: PM Kisan: ಪಿಎಂ ಕಿಸಾನ್ ಹಣ ಶೇ. 30ರಷ್ಟು ಹೆಚ್ಚಿಸುವ ಸಾಧ್ಯತೆ; ಬಜೆಟ್ನಲ್ಲಿ 80,000 ಕೋಟಿ ರೂ ನಿಯೋಜನೆ?
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ