ಬೆಂಗಳೂರು, ಜುಲೈ 19: ನಿನ್ನೆ, ಮೊನ್ನೆ ಸೇರಿ ಸತತ ಮೂರ್ನಾಲ್ಕು ದಿನ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ತುಸು ತಗ್ಗಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,450 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಬೈಸಿಕಲ್ನಿಂದ ಹಿಡಿದು ಬ್ರಹ್ಮೋಸ್ವರೆಗೆ, ಜಾಗತಿಕವಾಗಿ ಮೇಡ್ ಇನ್ ಇಂಡಿಯಾ ಉತ್ಪನ್ನಗಳ ಹವಾ ಹೇಗಿದೆ ನೋಡಿ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:00 am, Fri, 19 July 24