Gold Silver Price on 1st July: ಚಿನ್ನದ ಬೆಲೆ ವಾರದ ಆರಂಭದಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 July 1st: ಸೋಮವಾರ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,280 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 90 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,025 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 1st July: ಚಿನ್ನದ ಬೆಲೆ ವಾರದ ಆರಂಭದಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Follow us
|

Updated on: Jul 01, 2024 | 5:00 AM

ಬೆಂಗಳೂರು, ಜುಲೈ 1: ಚಿನ್ನದ ಬೆಲೆಯಲ್ಲಿ (Gold and silver Rates) ಇಂದು ಅಲ್ಪ ಏರಿಕೆಯಾಗಿದೆ. ಗ್ರಾಮ್​ಗೆ 10 ರೂನಷ್ಟು ಚಿನ್ನದ ಬೆಲೆ ಹೆಚ್ಚಾಗಿದೆ. ಕಳೆದ ಹತ್ತು ಹನ್ನೆರಡು ದಿನದಲ್ಲಿ ಚಿನ್ನದ ಬೆಲೆ ಹೆಚ್ಚಾಗಿರುವುದು ಐದು ರೂ ಮಾತ್ರವೇ. ಬೆಳ್ಳಿ ಬೆಲೆಯಲ್ಲೂ ಹಿಂದಿನ ಒಂದೆರಡು ವಾರಗಳಿಗೆ ಹೋಲಿಸಿದರೆ ಹೆಚ್ಚು ತುಮುಲಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,025 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 902.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,250 ರೂ
  • ಚೆನ್ನೈ: 66,850 ರೂ
  • ಮುಂಬೈ: 66,250 ರೂ
  • ದೆಹಲಿ: 66,400 ರೂ
  • ಕೋಲ್ಕತಾ: 66,250 ರೂ
  • ಕೇರಳ: 66,250 ರೂ
  • ಅಹ್ಮದಾಬಾದ್: 66,300 ರೂ
  • ಜೈಪುರ್: 66,400 ರೂ
  • ಲಕ್ನೋ: 66,400 ರೂ
  • ಭುವನೇಶ್ವರ್: 66,250 ರೂ

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ, ಪಿಪಿಎಫ್ ಇತ್ಯಾದಿ ಸ್ಮಾಲ್ ಸೇವಿಂಗ್ ಸ್ಕೀಮ್ ದರಗಳ ಮುಂದುವರಿಕೆ; ಇಲ್ಲಿದೆ ಈ ಯೋಜನೆಗಳ ದರಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (61,150 ರುಪಾಯಿ)
  • ದುಬೈ: 2,607.50 ಡಿರಾಮ್ (59,180 ರುಪಾಯಿ)
  • ಅಮೆರಿಕ: 710 ಡಾಲರ್ (59,190 ರುಪಾಯಿ)
  • ಸಿಂಗಾಪುರ: 985 ಸಿಂಗಾಪುರ್ ಡಾಲರ್ (60,550 ರುಪಾಯಿ)
  • ಕತಾರ್: 2,660 ಕತಾರಿ ರಿಯಾಲ್ (60,820 ರೂ)
  • ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,330 ರುಪಾಯಿ)
  • ಓಮನ್: 278 ಒಮಾನಿ ರಿಯಾಲ್ (60,190 ರುಪಾಯಿ)
  • ಕುವೇತ್: 212.30 ಕುವೇತಿ ದಿನಾರ್ (57,690 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,025 ರೂ
  • ಚೆನ್ನೈ: 9,450 ರೂ
  • ಮುಂಬೈ: 9,000 ರೂ
  • ದೆಹಲಿ: 9,000 ರೂ
  • ಕೋಲ್ಕತಾ: 9,000 ರೂ
  • ಕೇರಳ: 9,450 ರೂ
  • ಅಹ್ಮದಾಬಾದ್: 9,000 ರೂ
  • ಜೈಪುರ್: 9,000 ರೂ
  • ಲಕ್ನೋ: 9,000 ರೂ
  • ಭುವನೇಶ್ವರ್: 9,450 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು