Gold Silver Price on 21 July: ಏರಿಗೆ ಹಾದಿಯಲ್ಲಿ ಮುಂದುವರಿದ ಚಿನ್ನ; ವಿವಿಧ ನಗರ, ದೇಶಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

Bullion Market 2023, July 21st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,750 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.4 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21 July: ಏರಿಗೆ ಹಾದಿಯಲ್ಲಿ ಮುಂದುವರಿದ ಚಿನ್ನ; ವಿವಿಧ ನಗರ, ದೇಶಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?
ಚಿನ್ನ

Updated on: Jul 21, 2023 | 5:00 AM

ಬೆಂಗಳೂರು, ಜುಲೈ 21: ಜಾಗತಿಕವಾಗಿ ಚಿನ್ನದ ಬೆಲೆ (Gold Rates) ಏರಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಏರಿಕೆಗೆ ಅಲ್ಪವಿರಾಮ ಸಿಕ್ಕಿದೆ. ಕಳೆದ ಮೂರು ವಾರಗಳಿಂದ ಚಿನ್ನದ ಬೆಲೆ ಬಹುತೇಕ ನಿರಂತರವಾಗಿ ಏರುತ್ತಿದೆ. ಜೂನ್ 29ರಂದು 10 ಗ್ರಾಮ್​ಗೆ 53,850 ರೂ ಇದ್ದ ಚಿನ್ನದ ಬೆಲೆ ಈಗ 55,700 ರೂ ಗಡಿ ದಾಟಿದೆ. 20 ದಿನದಲ್ಲಿ 850 ರೂನಷ್ಟು ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,840 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,785 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 21ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 784 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 778.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,700 ರೂ
  • ಚೆನ್ನೈ: 56,100 ರೂ
  • ಮುಂಬೈ: 55,700 ರೂ
  • ದೆಹಲಿ: 55,850 ರೂ
  • ಕೋಲ್ಕತಾ: 55,700 ರೂ
  • ಕೇರಳ: 55,700 ರೂ
  • ಅಹ್ಮದಾಬಾದ್: 55,750 ರೂ
  • ಜೈಪುರ್: 55,850 ರೂ
  • ಲಕ್ನೋ: 55,850 ರೂ
  • ಭುವನೇಶ್ವರ್: 55,700 ರೂ

ಇದನ್ನೂ ಓದಿArecanut Pirce 20 July: ಇಂದಿನ ಅಡಿಕೆ ರೇಟ್, ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,785 ರುಪಾಯಿ)
  • ದುಬೈ: 2222.50 ಡಿರಾಮ್ (49,673 ರುಪಾಯಿ)
  • ಅಮೆರಿಕ: 605 ಡಾಲರ್ (49,677 ರುಪಾಯಿ)
  • ಸಿಂಗಾಪುರ: 816 ಸಿಂಗಾಪುರ್ ಡಾಲರ್ (50,526 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (51,448 ರೂ)
  • ಓಮನ್: 242 ಒಮಾನಿ ರಿಯಾಲ್ (51,529 ರುಪಾಯಿ)
  • ಕುವೇತ್: 189.50 ಕುವೇತಿ ದಿನಾರ್ (50,654 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,785 ರೂ
  • ಚೆನ್ನೈ: 8,200 ರೂ
  • ಮುಂಬೈ: 7,840 ರೂ
  • ದೆಹಲಿ: 7,840 ರೂ
  • ಕೋಲ್ಕತಾ: 7,840 ರೂ
  • ಕೇರಳ: 8,200 ರೂ
  • ಅಹ್ಮದಾಬಾದ್: 7,840 ರೂ
  • ಜೈಪುರ್: 7,840 ರೂ
  • ಲಕ್ನೋ: 7,840 ರೂ
  • ಭುವನೇಶ್ವರ್: 8,200 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us