Gold Silver Price on 22nd July: ಮುಂದುವರಿದ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಟ್ರೆಂಡ್; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 July 22nd: ಚಿನ್ನ, ಬೆಳ್ಳಿ ಬೆಲೆಯ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸಾಕಷ್ಟು ಇಳಿದಿದೆ. ಇದೇ ಇಳಿಕೆಯ ಟ್ರೆಂಡ್ ಮುಂದುವರಿಯಬಹುದು ಎನ್ನಲಾಗುತ್ತಿದೆ.

Gold Silver Price on 22nd July: ಮುಂದುವರಿದ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಟ್ರೆಂಡ್; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jul 22, 2024 | 5:00 AM

ಬೆಂಗಳೂರು, ಜುಲೈ 22: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ವಾರದ ಮಧ್ಯಭಾಗದಿಂದ ಇಳಿಕೆಯ ಹಾದಿಯಲ್ಲಿ ಮುಂದುವರಿದಿವೆ. ಇಂದು ಸೋಮವಾರವೂ ಎರಡೂ ಲೋಹಗಳ ಬೆಲೆ ಇಳಿಕೆಯಾಗಿದೆ. ಇವತ್ತು ಸಂಜೆಯೂ ಚಿನ್ನದ ಬೆಲೆ ಇಳಿಕೆ ಆಗಬಹುದು ಎಂದು ಹೇಳಲಾಗುತ್ತಿದೆ. ಈ ಬೆಲೆ ಇಳಿಕೆಗೆ ನಿರ್ದಿಷ್ಟ ಕಾರಣವಿಲ್ಲ. ಹೂಡಿಕೆದಾರರು ಚಿನ್ನದ ಬದಲು ಷೇರು ಮಾರುಕಟ್ಟೆಯತ್ತ ಚಿತ್ತ ನೆಟ್ಟಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,165 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 916.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,800 ರೂ
  • ಚೆನ್ನೈ: 68,350 ರೂ
  • ಮುಂಬೈ: 67,800 ರೂ
  • ದೆಹಲಿ: 67,950 ರೂ
  • ಕೋಲ್ಕತಾ: 67,800 ರೂ
  • ಕೇರಳ: 67,800 ರೂ
  • ಅಹ್ಮದಾಬಾದ್: 67,850 ರೂ
  • ಜೈಪುರ್: 67,950 ರೂ
  • ಲಕ್ನೋ: 67,950 ರೂ
  • ಭುವನೇಶ್ವರ್: 67,800 ರೂ

ಇದನ್ನೂ ಓದಿ: ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಪ್ರಸ್ತಾಪ: ಭುಗಿಲೆದ್ದ ಆಕ್ರೋಶ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,580 ರಿಂಗಿಟ್ (63,920 ರುಪಾಯಿ)
  • ದುಬೈ: 2,690 ಡಿರಾಮ್ (61,330 ರುಪಾಯಿ)
  • ಅಮೆರಿಕ: 740 ಡಾಲರ್ (61,540 ರುಪಾಯಿ)
  • ಸಿಂಗಾಪುರ: 1,010 ಸಿಂಗಾಪುರ್ ಡಾಲರ್ (62,730 ರುಪಾಯಿ)
  • ಕತಾರ್: 2,740 ಕತಾರಿ ರಿಯಾಲ್ (63,060 ರೂ)
  • ಸೌದಿ ಅರೇಬಿಯಾ: 2,760 ಸೌದಿ ರಿಯಾಲ್ (61,560 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,290 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,960 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,165 ರೂ
  • ಚೆನ್ನೈ: 9,600 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 9,600 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 9,600 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us