ಬೆಂಗಳೂರು, ಜುಲೈ 24: ಕಳೆದ ವಾರ ಬಹುತೇಕ ನಿರಂತರವಾಗಿ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold Rates) ವೀಕೆಂಡ್ನ ಎರಡು ದಿನ ಇಳಿಕೆ ಕಂಡಿವೆ. ಕಳೆದ ಮೂರು ವಾರಗಳಿಂದ ಚಿನ್ನದ ಬೆಲೆ ಬಹುತೇಕ ನಿರಂತರವಾಗಿ ಏರಿತ್ತು. ಜೂನ್ 29ರಂದು 10 ಗ್ರಾಮ್ಗೆ 53,850 ರೂ ಇದ್ದ ಚಿನ್ನದ ಬೆಲೆ ಜುಲೈ 20ರಂದು 55,700 ರೂ ಗಡಿ ದಾಟಿತ್ತು. 20 ದಿನದಲ್ಲಿ 850 ರೂನಷ್ಟು ಬೆಲೆ ಏರಿಕೆಯಾಗಿತ್ತು. ನಂತರ ಬೆಲೆ ತುಸು ತಗ್ಗಿ ಚಿನ್ನಪ್ರಿಯರಿಗೆ ಖುಷಿ ತರಿಸಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Suguna Chicken: ಸುಗುಣ ಚಿಕನ್ ಸ್ಥಾಪನೆ ಹಾಗೂ ಅದರ ಮಾಲೀಕರ ಇಂಟರೆಸ್ಟಿಂಗ್ ಕಥೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ