Gold Silver Price on 25 July: ದುಬೈ ಮೊದಲಾದ ಕಡೆ ಚಿನ್ನದ ಬೆಲೆ ಏರಿಕೆ; ಭಾರತದಲ್ಲಿ ಇಲ್ಲ ಬೆಲೆ ಹೆಚ್ಚಳ; ಬೆಳ್ಳಿ ಬೆಲೆ ತುಸು ಅಗ್ಗ

Bullion Market 2023, July 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 July: ದುಬೈ ಮೊದಲಾದ ಕಡೆ ಚಿನ್ನದ ಬೆಲೆ ಏರಿಕೆ; ಭಾರತದಲ್ಲಿ ಇಲ್ಲ ಬೆಲೆ ಹೆಚ್ಚಳ; ಬೆಳ್ಳಿ ಬೆಲೆ ತುಸು ಅಗ್ಗ
ಚಿನ್ನ

Updated on: Jul 25, 2023 | 4:53 AM

ಬೆಂಗಳೂರು, ಜುಲೈ 25: ಕಳೆದ ವಾರದ ಕೊನೆಯಲ್ಲಿ ಇಳಿದಿದ್ದ ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಯಥಾಸ್ಥಿತಿ ಕಾಯ್ದುಕೊಂಡಿದೆ. ದುಬೈ ಮೊದಲಾದ ಕೆಲ ವಿದೇಶಗಳಲ್ಲಿ ಬೆಲೆ ತುಸು ಹೆಚ್ಚಿದೆ. ಓಮನ್ ಮೊದಲಾದ ಕಡೆ ಬೆಲೆ ತುಸು ಇಲಿದಿದೆ, ಭಾರತದಲ್ಲಿ ಬೆಳ್ಳಿ ಬೆಲೆ ತುಸು ಇಳಿಕೆ ಕಂಡಿದೆ. ತಮಿಳುನಾಡು, ಕೇರಳ ಮೊದಲಾದ ಕಡೆ ಯಥಾಸ್ಥಿತಿಯಲ್ಲಿವೆ. ಬೆಂಗಳೂರು ಮೊದಲಾದ ಕಡೆ ಬೆಲೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 56,550 ರೂ
  • ಮುಂಬೈ: 55,150 ರೂ
  • ದೆಹಲಿ: 55,300 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,200 ರೂ
  • ಜೈಪುರ್: 55,300 ರೂ
  • ಲಕ್ನೋ: 55,300 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿShare Market: ಭಾರತದ ಷೇರುಮಾರುಕಟ್ಟೆಗೆ ಟಿ+1 ಟ್ರೇಡಿಂಗ್ ಸೈಕಲ್; ಇದು ವಿಶ್ವದಲ್ಲೇ ಪ್ರಥಮ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (51,484 ರುಪಾಯಿ)
  • ದುಬೈ: 2202.5 ಡಿರಾಮ್ (49,110 ರುಪಾಯಿ)
  • ಅಮೆರಿಕ: 600 ಡಾಲರ್ (49,194 ರುಪಾಯಿ)
  • ಸಿಂಗಾಪುರ: 811 ಸಿಂಗಾಪುರ್ ಡಾಲರ್ (50,031 ರುಪಾಯಿ)
  • ಕತಾರ್: 2,260 ಕತಾರಿ ರಿಯಾಲ್ (51,117 ರೂ)
  • ಓಮನ್: 240 ಒಮಾನಿ ರಿಯಾಲ್ (51,038 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,096 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,050 ರೂ
  • ಮುಂಬೈ: 7,750 ರೂ
  • ದೆಹಲಿ: 7,750 ರೂ
  • ಕೋಲ್ಕತಾ: 7,750 ರೂ
  • ಕೇರಳ: 8,050 ರೂ
  • ಅಹ್ಮದಾಬಾದ್: 7,750 ರೂ
  • ಜೈಪುರ್: 7,750 ರೂ
  • ಲಕ್ನೋ: 7,750 ರೂ
  • ಭುವನೇಶ್ವರ್: 8,050 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us