Gold Silver Price on 26th July: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಖರೀದಿಗೆ ಇದೇ ಸುವರ್ಣಾವಕಾಶ

Bullion Market 2024 July 26th: ಚಿನ್ನ, ಬೆಳ್ಳಿ ಬೆಲೆ ಕುಸಿತದ ಹಾದಿ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 95 ರೂನಷ್ಟು ಕುಸಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3 ರೂನಷ್ಟು ಇಳಿಕೆಯಾಗಿದೆ. ಕಳೆದ ಮೂರು ದಿನದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 7 ರೂನಷ್ಟು ಇಳಿಕೆ ಆಗಿದೆ.

Gold Silver Price on 26th July: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಖರೀದಿಗೆ ಇದೇ ಸುವರ್ಣಾವಕಾಶ
ಚಿನ್ನ

Updated on: Jul 26, 2024 | 5:03 AM

ಬೆಂಗಳೂರು, ಜುಲೈ 26: ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವೇ ಈ ಪರಿ ಇಳಿಕೆ ಆಗಿರುವುದು. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಬಜೆಟ್​ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಆಭರಣ ಚಿನ್ನ ಗ್ರಾಮ್​ಗೆ 6,400 ರೂಗೆ ಇಳಿದಿದೆ. ಸೌದಿಯಲ್ಲಿ ಚಿನ್ನದ ಬೆಲೆ ಹತ್ತಿರಹತ್ತಿರ 6,200 ರೂನಷ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 887.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 875 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,000 ರೂ
  • ಚೆನ್ನೈ: 64,300 ರೂ
  • ಮುಂಬೈ: 64,000 ರೂ
  • ದೆಹಲಿ: 64,150 ರೂ
  • ಕೋಲ್ಕತಾ: 64,000 ರೂ
  • ಕೇರಳ: 64,000 ರೂ
  • ಅಹ್ಮದಾಬಾದ್: 64,050 ರೂ
  • ಜೈಪುರ್: 64,150 ರೂ
  • ಲಕ್ನೋ: 64,150 ರೂ
  • ಭುವನೇಶ್ವರ್: 64,000 ರೂ

ಇದನ್ನೂ ಓದಿ: ಬದಲಾಗುತ್ತಿದೆ ಆರ್​​ಬಿಐ ನಿಯಮ… ಬ್ಯಾಂಕ್​ಗೆ ಹೋಗಿ ಕ್ಯಾಷ್ ವಿತ್​ಡ್ರಾ ಮಾಡುವ ಮುನ್ನ ಇದು ತಿಳಿದಿರಿ…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,540 ರಿಂಗಿಟ್ (63,600 ರುಪಾಯಿ)
  • ದುಬೈ: 2,660 ಡಿರಾಮ್ (60,590 ರುಪಾಯಿ)
  • ಅಮೆರಿಕ: 740 ಡಾಲರ್ (61,960 ರುಪಾಯಿ)
  • ಸಿಂಗಾಪುರ: 990 ಸಿಂಗಾಪುರ್ ಡಾಲರ್ (62,020 ರುಪಾಯಿ)
  • ಕತಾರ್: 2,710 ಕತಾರಿ ರಿಯಾಲ್ (62,230 ರೂ)
  • ಸೌದಿ ಅರೇಬಿಯಾ: 2,770 ಸೌದಿ ರಿಯಾಲ್ (61,830 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (62,420 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,100 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,450 ರೂ
  • ಚೆನ್ನೈ: 8,900 ರೂ
  • ಮುಂಬೈ: 8,450 ರೂ
  • ದೆಹಲಿ: 8,450 ರೂ
  • ಕೋಲ್ಕತಾ: 8,450 ರೂ
  • ಕೇರಳ: 8,900 ರೂ
  • ಅಹ್ಮದಾಬಾದ್: 8,450 ರೂ
  • ಜೈಪುರ್: 8,450 ರೂ
  • ಲಕ್ನೋ: 8,450 ರೂ
  • ಭುವನೇಶ್ವರ್: 8,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us