AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 27 July: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ; ಬೆಂಗಳೂರು ಸೇರಿದಂತೆ ವಿವಿಧೆಡೆ ಗೋಲ್ಡ್ ರೇಟ್ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್

Bullion Market 2023, July 27th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27 July: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ; ಬೆಂಗಳೂರು ಸೇರಿದಂತೆ ವಿವಿಧೆಡೆ ಗೋಲ್ಡ್ ರೇಟ್ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 27, 2023 | 5:00 AM

Share

ಬೆಂಗಳೂರು, ಜುಲೈ 27: ಭಾರತ ಹಾಗೂ ಅಂತಾರಾಷ್ಟ್ರೀಯ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಮತ್ತೆ ಏರುತ್ತಿವೆ. ಬಹುತೇಕ ಎಲ್ಲೆಡೆ ಎರಡೂ ಲೋಹಗಳ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿಯೂ ಬೆಲೆ ಏರಿಕೆಯ ಬಿಸಿ ತಾಕಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,740 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 27ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 774 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 56,520 ರೂ
  • ಮುಂಬೈ: 55,150 ರೂ
  • ದೆಹಲಿ: 55,300 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,200 ರೂ
  • ಜೈಪುರ್: 55,300 ರೂ
  • ಲಕ್ನೋ: 55,300 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿAlcohol King: ಶೇ. 66ರಷ್ಟು ಮಾರುಕಟ್ಟೆ ಪ್ರಾಬಲ್ಯ; ಇದೇ ಭಾರತದಲ್ಲಿ ಸ್ಪಿರಿಟ್​​ಗಳ ರಾಜ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (51,500 ರುಪಾಯಿ)
  • ದುಬೈ: 2210 ಡಿರಾಮ್ (49,367 ರುಪಾಯಿ)
  • ಅಮೆರಿಕ: 605 ಡಾಲರ್ (49,640 ರುಪಾಯಿ)
  • ಸಿಂಗಾಪುರ: 812 ಸಿಂಗಾಪುರ್ ಡಾಲರ್ (50,180 ರುಪಾಯಿ)
  • ಕತಾರ್: 2,275 ಕತಾರಿ ರಿಯಾಲ್ (51,272 ರೂ)
  • ಓಮನ್: 241 ಒಮಾನಿ ರಿಯಾಲ್ (51,357 ರುಪಾಯಿ)
  • ಕುವೇತ್: 188.50 ಕುವೇತಿ ದಿನಾರ್ (50,390 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 8,040 ರೂ
  • ಮುಂಬೈ: 7,740 ರೂ
  • ದೆಹಲಿ: 7,740 ರೂ
  • ಕೋಲ್ಕತಾ: 7,740 ರೂ
  • ಕೇರಳ: 8,040 ರೂ
  • ಅಹ್ಮದಾಬಾದ್: 7,740 ರೂ
  • ಜೈಪುರ್: 7,740 ರೂ
  • ಲಕ್ನೋ: 7,740 ರೂ
  • ಭುವನೇಶ್ವರ್: 8,040 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More