AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28 July: ಅಮೆರಿಕ ಎಫೆಕ್ಟ್; ಜಗತ್ತಿನೆಲ್ಲೆಡೆ ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರ ಪಟ್ಟಿ

Bullion Market 2023, July 28th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28 July: ಅಮೆರಿಕ ಎಫೆಕ್ಟ್; ಜಗತ್ತಿನೆಲ್ಲೆಡೆ ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 28, 2023 | 5:12 AM

Share

ಬೆಂಗಳೂರು, ಜುಲೈ 28: ಅಮೆರಿಕದಲ್ಲಿ ಬಡ್ಡಿ ದರ ಏರುತ್ತಿದ್ದಂತೆಯೇ ಜಾಗತಿಕವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಒಮ್ಮೆಲೇ ಎತ್ತರಕ್ಕೆ ಜಿಗಿಯತೊಡಗಿವೆ. ಅಮೆರಿಕ, ಯುಎಇ ಇತ್ಯಾದಿ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ತೀವ್ರತರವಾಗಿ ಏರಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಲ್ಪ ಏರಿಕೆಯಾಗಿದೆ. ಆದರೆ, ಇಂದು ಭಾರತದಲ್ಲೂ ಕೂಡ ದಿಢೀರ್ ಚಿನ್ನದ ಬೆಲೆ ಗಗನಕ್ಕೇರುವ ಎಲ್ಲಾ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,840 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,725 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 28ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 784 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 772.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,450 ರೂ
  • ಚೆನ್ನೈ: 55,800 ರೂ
  • ಮುಂಬೈ: 55,450 ರೂ
  • ದೆಹಲಿ: 55,600 ರೂ
  • ಕೋಲ್ಕತಾ: 55,450 ರೂ
  • ಕೇರಳ: 55,450 ರೂ
  • ಅಹ್ಮದಾಬಾದ್: 55,500 ರೂ
  • ಜೈಪುರ್: 55,600 ರೂ
  • ಲಕ್ನೋ: 55,600 ರೂ
  • ಭುವನೇಶ್ವರ್: 55,450 ರೂ

ಇದನ್ನೂ ಓದಿ: Arecanut Price 27 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,990 ರಿಂಗಿಟ್ (54,210 ರುಪಾಯಿ)
  • ದುಬೈ: 2392.50 ಡಿರಾಮ್ (53,404 ರುಪಾಯಿ)
  • ಅಮೆರಿಕ: 655 ಡಾಲರ್ (53,702 ರುಪಾಯಿ)
  • ಸಿಂಗಾಪುರ: 905 ಸಿಂಗಾಪುರ್ ಡಾಲರ್ (55,820 ರುಪಾಯಿ)
  • ಕತಾರ್: 2,420 ಕತಾರಿ ರಿಯಾಲ್ (54,492 ರೂ)
  • ಓಮನ್: 252.50 ಒಮಾನಿ ರಿಯಾಲ್ (53,766 ರುಪಾಯಿ)
  • ಕುವೇತ್: 200 ಕುವೇತಿ ದಿನಾರ್ (53,402 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,725 ರೂ
  • ಚೆನ್ನೈ: 8,150 ರೂ
  • ಮುಂಬೈ: 7,840 ರೂ
  • ದೆಹಲಿ: 7,840 ರೂ
  • ಕೋಲ್ಕತಾ: 7,840 ರೂ
  • ಕೇರಳ: 8,150 ರೂ
  • ಅಹ್ಮದಾಬಾದ್: 7,840 ರೂ
  • ಜೈಪುರ್: 7,840 ರೂ
  • ಲಕ್ನೋ: 7,840 ರೂ
  • ಭುವನೇಶ್ವರ್: 8,150 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್