ಬೆಂಗಳೂರು, ಜುಲೈ 28: ಅಮೆರಿಕದಲ್ಲಿ ಬಡ್ಡಿ ದರ ಏರುತ್ತಿದ್ದಂತೆಯೇ ಜಾಗತಿಕವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಒಮ್ಮೆಲೇ ಎತ್ತರಕ್ಕೆ ಜಿಗಿಯತೊಡಗಿವೆ. ಅಮೆರಿಕ, ಯುಎಇ ಇತ್ಯಾದಿ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ತೀವ್ರತರವಾಗಿ ಏರಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಲ್ಪ ಏರಿಕೆಯಾಗಿದೆ. ಆದರೆ, ಇಂದು ಭಾರತದಲ್ಲೂ ಕೂಡ ದಿಢೀರ್ ಚಿನ್ನದ ಬೆಲೆ ಗಗನಕ್ಕೇರುವ ಎಲ್ಲಾ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,840 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,725 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 27 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಕೋಕೋ ದರ ಹೀಗಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ