AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28th July: ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ; ಗ್ರಾಮ್​ಗೆ 100 ರೂ ಕುಸಿತ

Bullion Market 2024 July 28th: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಇದೀಗ ಸುವರ್ಣಾವಕಾಶದ ಬಾಗಿಲು ತೆರೆದಿದೆ. ಆಮದು ಸುಂಕ ಇಳಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆ ವ್ಯತ್ಯಯ ಮೊದಲಾದ ಕಾರಣದಿಂದ ಚಿನ್ನ ಸತತವಾಗಿ ಬೆಲೆ ಇಳಿಕೆ ಕಾಣುತ್ತಿದೆ. ಹತ್ತು ದಿನದಲ್ಲಿ ಶೇ. 10ರಷ್ಟು ಬೆಲೆ ಇಳಿದಿದೆ.

Gold Silver Price on 28th July: ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ; ಗ್ರಾಮ್​ಗೆ 100 ರೂ ಕುಸಿತ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 28, 2024 | 5:00 AM

Share

ಬೆಂಗಳೂರು, ಜುಲೈ 28: ಚಿನ್ನದ ಬೆಲೆ ಕುಸಿಯುವುದು ಮುಂದುವರಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಅಗ್ಗವಾಗುತ್ತಿದೆ. ನಾಲ್ಕು ತಿಂಗಳ ಹಿಂದಿದ್ದ ಮಟ್ಟಕ್ಕೆ ಬೆಲೆ ಇಳಿದಿದೆ. ಮಾರ್ಚ್ 29ಕ್ಕೆ 22 ಗ್ರಾಮ್ ಚಿನ್ನದ ಬೆಲೆ 6,300 ರೂ ಇತ್ತು. ಇವತ್ತೂ ಕೂಡ ಅದೇ ಬೆಲೆಗೆ ಇಳಿದಿದೆ. ಜುಲೈ 18ರಂದು 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ 6,860 ರೂ ಇತ್ತು. ಈಗ 6,300 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,425 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 842.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 63,000 ರೂ
  • ಚೆನ್ನೈ: 64,150 ರೂ
  • ಮುಂಬೈ: 63,000 ರೂ
  • ದೆಹಲಿ: 63,150 ರೂ
  • ಕೋಲ್ಕತಾ: 63,000 ರೂ
  • ಕೇರಳ: 63,000 ರೂ
  • ಅಹ್ಮದಾಬಾದ್: 63,050 ರೂ
  • ಜೈಪುರ್: 63,150 ರೂ
  • ಲಕ್ನೋ: 63,150 ರೂ
  • ಭುವನೇಶ್ವರ್: 63,000 ರೂ

ಇದನ್ನೂ ಓದಿ: ಗಮನಿಸಿ… ಮಧ್ಯವರ್ತಿಗಳ ಮಾತು ನಂಬಿ ಐಟಿಆರ್​ನಲ್ಲಿ ಸುಳ್ಳು ಕ್ಲೇಮ್ ಮಾಡಿದ್ರೆ ಸಿಕ್ಕಿಬೀಳ್ತೀರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,510 ರಿಂಗಿಟ್ (63,130 ರುಪಾಯಿ)
  • ದುಬೈ: 2,660 ಡಿರಾಮ್ (60,640 ರುಪಾಯಿ)
  • ಅಮೆರಿಕ: 720 ಡಾಲರ್ (60,710 ರುಪಾಯಿ)
  • ಸಿಂಗಾಪುರ: 1000 ಸಿಂಗಾಪುರ್ ಡಾಲರ್ (62,010 ರುಪಾಯಿ)
  • ಕತಾರ್: 2,710 ಕತಾರಿ ರಿಯಾಲ್ (62,240 ರೂ)
  • ಸೌದಿ ಅರೇಬಿಯಾ: 2,720 ಸೌದಿ ರಿಯಾಲ್ (60,710 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (62,320 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,030 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,425 ರೂ
  • ಚೆನ್ನೈ: 8,900 ರೂ
  • ಮುಂಬೈ: 8,450 ರೂ
  • ದೆಹಲಿ: 8,450 ರೂ
  • ಕೋಲ್ಕತಾ: 8,450 ರೂ
  • ಕೇರಳ: 8,900 ರೂ
  • ಅಹ್ಮದಾಬಾದ್: 8,450 ರೂ
  • ಜೈಪುರ್: 8,450 ರೂ
  • ಲಕ್ನೋ: 8,450 ರೂ
  • ಭುವನೇಶ್ವರ್: 8,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ