ಬೆಂಗಳೂರು, ಜುಲೈ 29: ಅಮೆರಿಕದಲ್ಲಿ ಬಡ್ಡಿ ದರ ಏರುತ್ತಿದ್ದಂತೆಯೇ ಜಾಗತಿಕವಾಗಿ ರಾಕೆಟ್ನಂತೆ ಏರಿಬಿಟ್ಟಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಅಷ್ಟೇ ವೇಗವಾಗಿ ಕೆಳಗಿಳಿದಿವೆ. ಭಾರತ ಹಾಗೂ ವಿದೇಶಗಳಲ್ಲಿ ಚಿನ್ನದ ಬೆಲೆ ದಿಢೀರ್ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,525 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Tax-free Gold: ಭೂತಾನ್ಗೆ ಟ್ರಿಪ್ ಹೋಗಿ, ತೀರಾ ಅಗ್ಗದ ಬೆಲೆಗೆ ಚಿನ್ನವನ್ನೂ ತನ್ನಿ; ಇದಪ್ಪಾ ಡಬಲ್ ಧಮಾಕ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ