ಬೆಂಗಳೂರು, ಜುಲೈ 29: ಸತತವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ ಈಗ ತುಸು ಏರಿದೆ. ಗ್ರಾಮ್ಗೆ 25 ರೂನಷ್ಟು ಏರಿದೆ. ವಿದೇಶಗಳ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಸ್ವಲ್ಪ ಹೆಚ್ಚಳವಾಗಿದೆ. ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ ಏರಿಕೆಗಿಂತ ಇಳಿಕೆಯಾಗಿದ್ದೇ ಹೆಚ್ಚು. ಬೆಳ್ಳಿ ಬೆಲೆಗಳೂ ಸಾಕಷ್ಟು ಇಳಿದಿವೆ. ಭಾರತದಲ್ಲಿ ಚಿನ್ನ, ಬೆಳ್ಳಿ ಮೇಲೆ ಆಮದು ಸುಂಕ ಕಡಿಮೆಗೊಂಡ ಕಾರಣಕ್ಕೆ ಚಿನ್ನದ ಬೆಲೆ ಹೆಚ್ಚಿನ ಪ್ರಮಾಣದಲ್ಲಿ ಕುಸಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,425 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ; ಡೆಡ್ಲೈನ್ ವಿಸ್ತರಣೆ ಸಾಧ್ಯತೆ ಕಡಿಮೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ