Gold Silver Price on 2nd July: ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 July 2nd: ಬೆಳ್ಳಿ ಬೆಲೆಯಲ್ಲಿ ಇಂದು ತುಸು ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,280 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 90.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,015 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 2nd July: ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ

Updated on: Jul 02, 2024 | 5:00 AM

ಬೆಂಗಳೂರು, ಜುಲೈ 2: ನಿನ್ನೆ ಚಿನ್ನದ ಬೆಲೆ ಏರಿಕೆಯಾದರೆ ಇಂದು ಬೆಳ್ಳಿ ಬೆಲೆ (Gold and silver Rates) ಅಲ್ಪ ಹೆಚ್ಚಳವಾಗಿದೆ. ಬೆಳ್ಳಿ ಗ್ರಾಮ್​ಗೆ 20 ಪೈಸೆಯಷ್ಟು ಬೆಲೆ ಹೆಚ್ಚಳ ಕಂಡಿದೆ. ಕಳೆದ ಒಂದು ತಿಂಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತೀರಾ ದೊಡ್ಡ ಮಟ್ಟದಲ್ಲಿ ವ್ಯತ್ಯಯವಾಗುವುದು ನಿಂತಿದೆ. ಈ ವರ್ಷ ಈ ಎರಡೂ ಲೋಹಗಳು ಬೆಲೆ ವಿಚಾರದಲ್ಲಿ ಬಹಳ ತೀವ್ರ ಮಟ್ಟದಲ್ಲಿ ಏರಿಳಿತಗಳನ್ನು ಕಂಡಿದ್ದವು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,020 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,015 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 902 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 901.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,250 ರೂ
  • ಚೆನ್ನೈ: 66,850 ರೂ
  • ಮುಂಬೈ: 66,250 ರೂ
  • ದೆಹಲಿ: 66,400 ರೂ
  • ಕೋಲ್ಕತಾ: 66,250 ರೂ
  • ಕೇರಳ: 66,250 ರೂ
  • ಅಹ್ಮದಾಬಾದ್: 66,300 ರೂ
  • ಜೈಪುರ್: 66,400 ರೂ
  • ಲಕ್ನೋ: 66,400 ರೂ
  • ಭುವನೇಶ್ವರ್: 66,250 ರೂ

ಇದನ್ನೂ ಓದಿ: ಭಾರತದಲ್ಲಿ ನಡೆಯುವ ಮದುವೆ ಸಂಖ್ಯೆ ಚೀನಾಗಿಂತಲೂ ಹೆಚ್ಚು; ವಿವಾಹ ಉದ್ಯಮ ಅಮೆರಿಕದಕ್ಕಿಂತಲೂ ಎರಡು ಪಟ್ಟು ದೊಡ್ಡದು: ಜೆಫರೀಸ್ ವರದಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (61,150 ರುಪಾಯಿ)
  • ದುಬೈ: 2,607.50 ಡಿರಾಮ್ (59,180 ರುಪಾಯಿ)
  • ಅಮೆರಿಕ: 710 ಡಾಲರ್ (59,190 ರುಪಾಯಿ)
  • ಸಿಂಗಾಪುರ: 985 ಸಿಂಗಾಪುರ್ ಡಾಲರ್ (60,550 ರುಪಾಯಿ)
  • ಕತಾರ್: 2,660 ಕತಾರಿ ರಿಯಾಲ್ (60,820 ರೂ)
  • ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,330 ರುಪಾಯಿ)
  • ಓಮನ್: 278 ಒಮಾನಿ ರಿಯಾಲ್ (60,190 ರುಪಾಯಿ)
  • ಕುವೇತ್: 212.30 ಕುವೇತಿ ದಿನಾರ್ (57,690 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,015 ರೂ
  • ಚೆನ್ನೈ: 9,470 ರೂ
  • ಮುಂಬೈ: 9,020 ರೂ
  • ದೆಹಲಿ: 9,020 ರೂ
  • ಕೋಲ್ಕತಾ: 9,020 ರೂ
  • ಕೇರಳ: 9,470 ರೂ
  • ಅಹ್ಮದಾಬಾದ್: 9,020 ರೂ
  • ಜೈಪುರ್: 9,020 ರೂ
  • ಲಕ್ನೋ: 9,020 ರೂ
  • ಭುವನೇಶ್ವರ್: 9,470 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us