Gold Silver Price on 31st July: ಚಿನ್ನ, ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ; ಇನ್ನಷ್ಟು ಕುಸಿಯುತ್ತಾ ದರ?

Bullion Market 2024 July 31st: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಅಲ್ಪ ಇಳಿಕೆ ಆಗಿದೆ. ಯುಎಸ್ ಫೆಡರಲ್ ರಿಸರ್ವ್ ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಇನ್ನಷ್ಟು ದರ ಇಳಿಕೆಯಾಗುವ ಸಾಧ್ಯತೆ ಇದೆ. ಇಂದು ಬುಧವಾರ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 6,895 ರೂ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 84.50 ರೂ ಆಗಿದೆ.

Gold Silver Price on 31st July: ಚಿನ್ನ, ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ; ಇನ್ನಷ್ಟು ಕುಸಿಯುತ್ತಾ ದರ?
ಚಿನ್ನ

Updated on: Jul 31, 2024 | 5:00 AM

ಬೆಂಗಳೂರು, ಜುಲೈ 31: ನಿನ್ನೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಸ್ವಲ್ಪ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ತಗ್ಗಿದೆ. ನಿನ್ನೆ 50 ಪೈಸೆ ಹೆಚ್ಚಾಗಿದ್ದ ಬೆಳ್ಳಿ ಬೆಲೆ ಇಂದು ಅಷ್ಟೇ ಇಳಿಕೆ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ದೇಶಗಳಲ್ಲಿ ಬೆಲೆ ಯಥಾಸ್ಥಿತಿ ಇದೆ. ಕೆಲವೆಡೆ ಮಾತ್ರ ಬೆಲೆ ತಗ್ಗಿದೆ. ಅಮೆರಿಕದ ಫೆಡರಲ್ ರಿಸರ್ವ್ ಸಭೆ ನಿರ್ಧಾರ ಇಂದು ಹೊರಬಂದ ಪರಿಣಾಮ ಚಿನಿವಾರ ಪೇಟೆಯಲ್ಲಿ ಎಷ್ಟರ ಮಟ್ಟಿಗೆ ಆಗುತ್ತೆ ಎಂದು ಕಾದುನೋಡಬೇಕು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 63,200 ರೂ
  • ಚೆನ್ನೈ: 63,850 ರೂ
  • ಮುಂಬೈ: 63,200 ರೂ
  • ದೆಹಲಿ: 63,350 ರೂ
  • ಕೋಲ್ಕತಾ: 63,200 ರೂ
  • ಕೇರಳ: 63,200 ರೂ
  • ಅಹ್ಮದಾಬಾದ್: 63,250 ರೂ
  • ಜೈಪುರ್: 63,350 ರೂ
  • ಲಕ್ನೋ: 63,350 ರೂ
  • ಭುವನೇಶ್ವರ್: 63,200 ರೂ

ಇದನ್ನೂ ಓದಿ: ಕೇವಲ 107 ರೂಗೆ ಬಿಎಸ್ಸೆನ್ನೆಲ್ ಪ್ಲಾನ್; ಇತರ ಕಂಪನಿಗಳ ಪ್ರೀಪೇಯ್ಡ್ ಪ್ಲಾನ್​ಗಳೊಂದಿಗೆ ಹೋಲಿಸಿ ನೋಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (63,410 ರುಪಾಯಿ)
  • ದುಬೈ: 2,680 ಡಿರಾಮ್ (61,030 ರುಪಾಯಿ)
  • ಅಮೆರಿಕ: 730 ಡಾಲರ್ (61,120 ರುಪಾಯಿ)
  • ಸಿಂಗಾಪುರ: 1000 ಸಿಂಗಾಪುರ್ ಡಾಲರ್ (62,110 ರುಪಾಯಿ)
  • ಕತಾರ್: 2,720 ಕತಾರಿ ರಿಯಾಲ್ (62,570 ರೂ)
  • ಸೌದಿ ಅರೇಬಿಯಾ: 2,740 ಸೌದಿ ರಿಯಾಲ್ (61,150 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (62,740 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,450 ರೂ
  • ಚೆನ್ನೈ: 8,900 ರೂ
  • ಮುಂಬೈ: 8,450 ರೂ
  • ದೆಹಲಿ: 8,450 ರೂ
  • ಕೋಲ್ಕತಾ: 8,450 ರೂ
  • ಕೇರಳ: 8,900 ರೂ
  • ಅಹ್ಮದಾಬಾದ್: 8,450 ರೂ
  • ಜೈಪುರ್: 8,450 ರೂ
  • ಲಕ್ನೋ: 8,450 ರೂ
  • ಭುವನೇಶ್ವರ್: 8,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us