AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 04 July: ಮತ್ತೆ ಹೊಯ್ದಾಟಕ್ಕಿಳಿದ ಚಿನ್ನದ ಬೆಲೆ; ಈಗ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ರೇಟು, ಇಲ್ಲಿದೆ ಡೀಟೇಲ್ಸ್

Bullion Market 2023, July 4th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,960 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 71.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 04 July: ಮತ್ತೆ ಹೊಯ್ದಾಟಕ್ಕಿಳಿದ ಚಿನ್ನದ ಬೆಲೆ; ಈಗ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ರೇಟು, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 04, 2023 | 5:00 AM

Share

ಬೆಂಗಳೂರು: ಚಿನ್ನದ ಬೆಲೆ (Gold and Silver Rates) ಈ ವಾರವೂ ಏರಿಳಿತದ ದಾರಿಯಲ್ಲಿ ಸಾಗುತ್ತಿದೆ. ವಾರಾಂತ್ಯದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಈಗ ತುಸು ಇಳಿದಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಸ್ವಲ್ಪ ಅಗ್ಗವಾಗಿದೆ. ಹಬ್ಬಕ್ಕೆ ಚಿನ್ನ ಖರೀದಿಸುವವರಿಗೆ ಇದು ಸಕಾಲ ಎನಿಸಿದೆ. ಹೂಡಿಕೆಯಾಗಿ ಚಿನ್ನ ಖರೀದಿಸುವವರಿಗೂ ಇದು ಸಕಾಲ. ಇನ್ನು ಬೆಳ್ಳಿ ಬೆಲೆ ಸದ್ಯ ಯಥಾಸ್ಥಿತಿಯಲ್ಲಿದೆ. ಕಳೆದ ಮೂರ್ನಾಲ್ಕು ತಿಂಗಳಿಂದಲೂ ಬೆಳ್ಳಿ ಬೆಲೆ ಹೆಚ್ಚು ಏರಿಕೆ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,960 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,190 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,960 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 719 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,960 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,050 ರೂ
  • ಚೆನ್ನೈ: 54,350 ರೂ
  • ಮುಂಬೈ: 54,050 ರೂ
  • ದೆಹಲಿ: 54,200 ರೂ
  • ಕೋಲ್ಕತಾ: 54,050 ರೂ
  • ಕೇರಳ: 54,050 ರೂ
  • ಅಹ್ಮದಾಬಾದ್: 54,100 ರೂ
  • ಜೈಪುರ್: 54,200 ರೂ
  • ಲಕ್ನೋ: 54,200 ರೂ
  • ಭುವನೇಶ್ವರ್: 54,050 ರೂ

ಇದನ್ನೂ ಓದಿ: Arecanut Price 3 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,480 ರುಪಾಯಿ)
  • ದುಬೈ: 2145 ಡಿರಾಮ್ (47,850 ರುಪಾಯಿ)
  • ಅಮೆರಿಕ: 590 ಡಾಲರ್ (48,346 ರುಪಾಯಿ)
  • ಸಿಂಗಾಪುರ: 806 ಸಿಂಗಾಪುರ್ ಡಾಲರ್ (48,879 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (49,848 ರೂ)
  • ಓಮನ್: 235 ಒಮಾನಿ ರಿಯಾಲ್ (50,017 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,179 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,150 ರೂ
  • ಚೆನ್ನೈ: 7,570 ರೂ
  • ಮುಂಬೈ: 7,190 ರೂ
  • ದೆಹಲಿ: 7,190 ರೂ
  • ಕೋಲ್ಕತಾ: 7,190 ರೂ
  • ಕೇರಳ: 7,570 ರೂ
  • ಅಹ್ಮದಾಬಾದ್: 7,190 ರೂ
  • ಜೈಪುರ್: 7,190 ರೂ
  • ಲಕ್ನೋ: 7,190 ರೂ
  • ಭುವನೇಶ್ವರ್: 7,570 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ