ಬೆಂಗಳೂರು: ಚಿನ್ನದ ಬೆಲೆ (Gold and Silver Rates) ಈ ವಾರವೂ ಏರಿಳಿತದ ದಾರಿಯಲ್ಲಿ ಸಾಗುತ್ತಿದೆ. ವಾರಾಂತ್ಯದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಈಗ ತುಸು ಇಳಿದಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಸ್ವಲ್ಪ ಅಗ್ಗವಾಗಿದೆ. ಹಬ್ಬಕ್ಕೆ ಚಿನ್ನ ಖರೀದಿಸುವವರಿಗೆ ಇದು ಸಕಾಲ ಎನಿಸಿದೆ. ಹೂಡಿಕೆಯಾಗಿ ಚಿನ್ನ ಖರೀದಿಸುವವರಿಗೂ ಇದು ಸಕಾಲ. ಇನ್ನು ಬೆಳ್ಳಿ ಬೆಲೆ ಸದ್ಯ ಯಥಾಸ್ಥಿತಿಯಲ್ಲಿದೆ. ಕಳೆದ ಮೂರ್ನಾಲ್ಕು ತಿಂಗಳಿಂದಲೂ ಬೆಳ್ಳಿ ಬೆಲೆ ಹೆಚ್ಚು ಏರಿಕೆ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 58,960 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,190 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,150 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 3 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ