Gold Silver Price on 4th July: ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ; ಚಿನ್ನದ ಬೆಲೆ ವಿದೇಶಗಳಲ್ಲಿ ಏರಿಕೆ; ಇವತ್ತಿನ ದರಪಟ್ಟಿ

Bullion Market 2024 July 4th: ಚಿನ್ನದ ಬೆಲೆ ಇಂದು ಗುರುವಾರ ಭಾರತದಲ್ಲಿ ವ್ಯತ್ಯಯ ಕಂಡಿಲ್ಲ. ಆದರೆ, ವಿದೇಶಗಳಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಎಲ್ಲೆಡೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ ಒಂದು ಗ್ರಾಮ್ ಚಿನ್ನದ ಬೆಲೆ (ಆಭರಣ) 6,635 ರೂ ಇದೆ. ಬೆಳ್ಳಿ ಬೆಲೆ ಗ್ರಾಮ್​ಗೆ 91.50 ರೂ ಇದೆ.

Gold Silver Price on 4th July: ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ; ಚಿನ್ನದ ಬೆಲೆ ವಿದೇಶಗಳಲ್ಲಿ ಏರಿಕೆ; ಇವತ್ತಿನ ದರಪಟ್ಟಿ
ಚಿನ್ನದ ಮಳಿಗೆ
Follow us
|

Updated on: Jul 04, 2024 | 5:00 AM

ಬೆಂಗಳೂರು, ಜುಲೈ 4: ವಿದೇಶಗಳ ಹೆಚ್ಚಿನ ಕಡೆ ಇಂದು ಗುರುವಾರ ಚಿನ್ನದ ಬೆಲೆಯಲ್ಲಿ (Gold and silver Rates) ಹೆಚ್ಚಳವಾಗಿದೆ. ಭಾರತದಲ್ಲಿ ಚಿನ್ನ ಸದ್ಯ ನಿನ್ನೆಯ ಬೆಲೆಯೇ ಮುಂದುವರಿದಿದೆ. ಇಂದು ಭಾರತದಲ್ಲೂ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಇದೇ ವೇಳೆ, ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್​ಗೆ 50 ಪೈಸೆಯಷ್ಟು ಹೆಚ್ಚಾಗಿದೆ. ಕಳೆದ ಎರಡು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯಗಳಾಗದಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,350 ರೂ
  • ಚೆನ್ನೈ: 66,950 ರೂ
  • ಮುಂಬೈ: 66,350 ರೂ
  • ದೆಹಲಿ: 66,500 ರೂ
  • ಕೋಲ್ಕತಾ: 66,350 ರೂ
  • ಕೇರಳ: 66,350 ರೂ
  • ಅಹ್ಮದಾಬಾದ್: 66,400 ರೂ
  • ಜೈಪುರ್: 66,500 ರೂ
  • ಲಕ್ನೋ: 66,500 ರೂ
  • ಭುವನೇಶ್ವರ್: 66,350 ರೂ

ಇದನ್ನೂ ಓದಿ: ಗ್ರಾಮೀಣ ಭಾಗದ ಬಡತನ 12 ವರ್ಷದಲ್ಲಿ ಶೇ. 24.8ರಿಂದ ಶೇ. 8.6ಕ್ಕೆ ಇಳಿಕೆ: ಸಮೀಕ್ಷೆ ವರದಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,580 ರುಪಾಯಿ)
  • ದುಬೈ: 2,627.50 ಡಿರಾಮ್ (59,740 ರುಪಾಯಿ)
  • ಅಮೆರಿಕ: 710 ಡಾಲರ್ (59,300 ರುಪಾಯಿ)
  • ಸಿಂಗಾಪುರ: 987 ಸಿಂಗಾಪುರ್ ಡಾಲರ್ (60,780 ರುಪಾಯಿ)
  • ಕತಾರ್: 2,670 ಕತಾರಿ ರಿಯಾಲ್ (61,160 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,890 ರುಪಾಯಿ)
  • ಓಮನ್: 279 ಒಮಾನಿ ರಿಯಾಲ್ (60,520 ರುಪಾಯಿ)
  • ಕುವೇತ್: 214.10 ಕುವೇತಿ ದಿನಾರ್ (58,320 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,050 ರೂ
  • ಚೆನ್ನೈ: 9,600 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 9,600 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 9,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ