ಬೆಂಗಳೂರು, ಜುಲೈ 4: ವಿದೇಶಗಳ ಹೆಚ್ಚಿನ ಕಡೆ ಇಂದು ಗುರುವಾರ ಚಿನ್ನದ ಬೆಲೆಯಲ್ಲಿ (Gold and silver Rates) ಹೆಚ್ಚಳವಾಗಿದೆ. ಭಾರತದಲ್ಲಿ ಚಿನ್ನ ಸದ್ಯ ನಿನ್ನೆಯ ಬೆಲೆಯೇ ಮುಂದುವರಿದಿದೆ. ಇಂದು ಭಾರತದಲ್ಲೂ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಇದೇ ವೇಳೆ, ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್ಗೆ 50 ಪೈಸೆಯಷ್ಟು ಹೆಚ್ಚಾಗಿದೆ. ಕಳೆದ ಎರಡು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯಗಳಾಗದಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,050 ರುಪಾಯಿಯಲ್ಲಿ ಇದೆ.
ಇದನ್ನೂ ಓದಿ: ಗ್ರಾಮೀಣ ಭಾಗದ ಬಡತನ 12 ವರ್ಷದಲ್ಲಿ ಶೇ. 24.8ರಿಂದ ಶೇ. 8.6ಕ್ಕೆ ಇಳಿಕೆ: ಸಮೀಕ್ಷೆ ವರದಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ