Gold Silver Price on 05 July: ಹೊಯ್ದಾಟ ಮುಂದುವರಿಸಿದ ಚಿನ್ನ; ತುಸು ಅಗ್ಗಗೊಂಡ ಬೆಳ್ಳಿ ಬೆಲೆ; ಇಲ್ಲಿದೆ ಇತ್ತೀಚಿನ ದರ

Bullion Market 2023, July 5th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,060 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 71.70 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 05 July: ಹೊಯ್ದಾಟ ಮುಂದುವರಿಸಿದ ಚಿನ್ನ; ತುಸು ಅಗ್ಗಗೊಂಡ ಬೆಳ್ಳಿ ಬೆಲೆ; ಇಲ್ಲಿದೆ ಇತ್ತೀಚಿನ ದರ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 05, 2023 | 5:00 AM

ಬೆಂಗಳೂರು: ನಿರೀಕ್ಷೆಯಂತೆ ಚಿನ್ನದ ಬೆಲೆ (Gold and Silver Rates) ಅಕ್ಷರಶಃ ತೂಗುಯ್ಯಾಲೆಯಂತೆ ಸಾಗುತ್ತಿದೆ. ಅಂತಾರಾಷ್ಟ್ರೀಯ ಹಣಕಾಸು ಪರಿಸ್ಥಿತಿಯ ತುಮುಲಗಳ ಮಧ್ಯೆ ಚಿನ್ನದ ಬೆಲೆ ಹೊಯ್ದಾಡುತ್ತಿದೆ. ಭಾರತದಲ್ಲಿ ಬಹುತೇಕ ಎಲ್ಲೆಡೆ ಚಿನ್ನದ ಬೆಲೆ ತುಸು ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಏರಿಕೆ ಆಗಿದೆ. ಆದರೆ, ಬೆಳ್ಳಿ ಬೆಲೆ ತುಸು ಇಳಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದಲೂ ಬೆಳ್ಳಿ ಬೆಲೆ ಹೆಚ್ಚು ಏರಿಕೆ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,125 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 5ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 712.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,150 ರೂ
  • ಚೆನ್ನೈ: 54,520 ರೂ
  • ಮುಂಬೈ: 54,150 ರೂ
  • ದೆಹಲಿ: 54,300 ರೂ
  • ಕೋಲ್ಕತಾ: 54,150 ರೂ
  • ಕೇರಳ: 54,150 ರೂ
  • ಅಹ್ಮದಾಬಾದ್: 54,200 ರೂ
  • ಜೈಪುರ್: 54,300 ರೂ
  • ಲಕ್ನೋ: 54,300 ರೂ
  • ಭುವನೇಶ್ವರ್: 54,150 ರೂ

ಇದನ್ನೂ ಓದಿArecanut Price 4 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,480 ರುಪಾಯಿ)
  • ದುಬೈ: 2165 ಡಿರಾಮ್ (48,320 ರುಪಾಯಿ)
  • ಅಮೆರಿಕ: 590 ಡಾಲರ್ (48,346 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,139 ರುಪಾಯಿ)
  • ಕತಾರ್: 2,230 ಕತಾರಿ ರಿಯಾಲ್ (50,216 ರೂ)
  • ಓಮನ್: 236 ಒಮಾನಿ ರಿಯಾಲ್ (50,240 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (49,378 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,125 ರೂ
  • ಚೆನ್ನೈ: 7,580 ರೂ
  • ಮುಂಬೈ: 7,170 ರೂ
  • ದೆಹಲಿ: 7,170 ರೂ
  • ಕೋಲ್ಕತಾ: 7,170 ರೂ
  • ಕೇರಳ: 7,580 ರೂ
  • ಅಹ್ಮದಾಬಾದ್: 7,170 ರೂ
  • ಜೈಪುರ್: 7,170 ರೂ
  • ಲಕ್ನೋ: 7,170 ರೂ
  • ಭುವನೇಶ್ವರ್: 7,580 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್