ಬೆಂಗಳೂರು: ನಿರೀಕ್ಷೆಯಂತೆ ಚಿನ್ನದ ಬೆಲೆ (Gold and Silver Rates) ಅಕ್ಷರಶಃ ತೂಗುಯ್ಯಾಲೆಯಂತೆ ಸಾಗುತ್ತಿದೆ. ಅಂತಾರಾಷ್ಟ್ರೀಯ ಹಣಕಾಸು ಪರಿಸ್ಥಿತಿಯ ತುಮುಲಗಳ ಮಧ್ಯೆ ಚಿನ್ನದ ಬೆಲೆ ಹೊಯ್ದಾಡುತ್ತಿದೆ. ಭಾರತದಲ್ಲಿ ಬಹುತೇಕ ಎಲ್ಲೆಡೆ ಚಿನ್ನದ ಬೆಲೆ ತುಸು ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಏರಿಕೆ ಆಗಿದೆ. ಆದರೆ, ಬೆಳ್ಳಿ ಬೆಲೆ ತುಸು ಇಳಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದಲೂ ಬೆಳ್ಳಿ ಬೆಲೆ ಹೆಚ್ಚು ಏರಿಕೆ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,125 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 4 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ