AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 07 July: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ; ವಾರಾಂತ್ಯದಲ್ಲಿ ಬೆಲೆ ಇಳಿಯುವ ಸೂಚನೆ; ಇವತ್ತಿನ ದರ ಎಷ್ಟಿದೆ ನೋಡಿ

Bullion Market 2023, July 7th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 07 July: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ; ವಾರಾಂತ್ಯದಲ್ಲಿ ಬೆಲೆ ಇಳಿಯುವ ಸೂಚನೆ; ಇವತ್ತಿನ ದರ ಎಷ್ಟಿದೆ ನೋಡಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 5:02 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ವೀಕೆಂಡ್ ಸಮೀಪಿಸುತ್ತಿರುವಂತೆಯೇ ಏರಿಕೆ ಮುಂದುವರಿಸಿವೆ. ಭಾರತದ ಬಹುತೇಕ ಕಡೆ ಚಿನ್ನದ ಬೆಲೆ ಏರಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಕುಗ್ಗುವ ನಿರೀಕ್ಷೆ ಇದೆ. ದುಬೈನಲ್ಲಿ ಸತತ ಎರಡು ದಿನ ಚಿನ್ನದ ಬೆಲೆ ಇಳಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಬೆಳ್ಳಿ ಬೆಲೆ ಅಪರೂಪಕ್ಕೆ ಸತತ ಏರಿಕೆಯ ಹಾದಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,125 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 7ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 712.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,250 ರೂ
  • ಚೆನ್ನೈ: 54,600 ರೂ
  • ಮುಂಬೈ: 54,250 ರೂ
  • ದೆಹಲಿ: 54,400 ರೂ
  • ಕೋಲ್ಕತಾ: 54,250 ರೂ
  • ಕೇರಳ: 54,250 ರೂ
  • ಅಹ್ಮದಾಬಾದ್: 54,300 ರೂ
  • ಜೈಪುರ್: 54,400 ರೂ
  • ಲಕ್ನೋ: 54,400 ರೂ
  • ಭುವನೇಶ್ವರ್: 54,250 ರೂ

ಇದನ್ನೂ ಓದಿ: Investment Options: ಭೂಮಿ ಮತ್ತು ಚಿನ್ನ; ಯಾವುದರ ಮೇಲೆ ಹೂಡಿಕೆ ಉತ್ತಮ? ಸಾಧಕ, ಬಾಧಕ ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,697 ರುಪಾಯಿ)
  • ದುಬೈ: 2150 ಡಿರಾಮ್ (48,338 ರುಪಾಯಿ)
  • ಅಮೆರಿಕ: 595 ಡಾಲರ್ (48,935 ರುಪಾಯಿ)
  • ಸಿಂಗಾಪುರ: 807 ಸಿಂಗಾಪುರ್ ಡಾಲರ್ (49,162 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,266 ರೂ)
  • ಓಮನ್: 234.50 ಒಮಾನಿ ರಿಯಾಲ್ (50,260 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (49,378 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,125 ರೂ
  • ಚೆನ್ನೈ: 7,670 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,670 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,670 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್