ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ವೀಕೆಂಡ್ ಸಮೀಪಿಸುತ್ತಿರುವಂತೆಯೇ ಏರಿಕೆ ಮುಂದುವರಿಸಿವೆ. ಭಾರತದ ಬಹುತೇಕ ಕಡೆ ಚಿನ್ನದ ಬೆಲೆ ಏರಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಕುಗ್ಗುವ ನಿರೀಕ್ಷೆ ಇದೆ. ದುಬೈನಲ್ಲಿ ಸತತ ಎರಡು ದಿನ ಚಿನ್ನದ ಬೆಲೆ ಇಳಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಬೆಳ್ಳಿ ಬೆಲೆ ಅಪರೂಪಕ್ಕೆ ಸತತ ಏರಿಕೆಯ ಹಾದಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,125 ರುಪಾಯಿಯಲ್ಲಿ ಇದೆ.
ಇದನ್ನೂ ಓದಿ: Investment Options: ಭೂಮಿ ಮತ್ತು ಚಿನ್ನ; ಯಾವುದರ ಮೇಲೆ ಹೂಡಿಕೆ ಉತ್ತಮ? ಸಾಧಕ, ಬಾಧಕ ತಿಳಿದಿರಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ