AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10th June: ಮತ್ತೆ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 10th: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,670 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 10th June: ಮತ್ತೆ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 10, 2024 | 5:00 AM

Share

ಬೆಂಗಳೂರು, ಜೂನ್ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ವಾರಾಂತ್ಯದಲ್ಲಿ ಭರ್ಜರಿ ಇಳಿಕೆ ಆಗಿತ್ತು. ಇವತ್ತೂ ಕೂಡ ತುಸು ಇಳಿಕೆ ಆಗಿದೆ. ಕಳೆದ ಹತ್ತು ದಿನದಲ್ಲಿ ಈ ಎರಡೂ ಲೋಹಗಳ ಬೆಲೆ ಸಾಕಷ್ಟು ಇಳಿದಿವೆ. ಷೇರು ಮಾರುಕಟ್ಟೆ ಹೊಸ ಕಳೆಗಟ್ಟಿರುವುದು ಚಿನ್ನಕ್ಕೆ ಬೇಡಿಕೆ ತುಸು ತಗ್ಗಿದೆ. ಈ ಕಾರಣಕ್ಕೆ ಚಿನ್ನದ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಕೆ ಕಾಣುತ್ತಿರಬಹುದು ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,700 ರೂ
  • ಚೆನ್ನೈ: 66,500 ರೂ
  • ಮುಂಬೈ: 65,700 ರೂ
  • ದೆಹಲಿ: 65,850 ರೂ
  • ಕೋಲ್ಕತಾ: 65,700 ರೂ
  • ಕೇರಳ: 65,700 ರೂ
  • ಅಹ್ಮದಾಬಾದ್: 65,750 ರೂ
  • ಜೈಪುರ್: 65,850 ರೂ
  • ಲಕ್ನೋ: 65,850 ರೂ
  • ಭುವನೇಶ್ವರ್: 65,700 ರೂ

ಇದನ್ನೂ ಓದಿ: ಈ ವಾರ ಎರಡು ಐಪಿಒ; ಇಕ್ಸಿಗೋ, ಯುನೈಟೆಡ್ ಕಾಟ್​ಫ್ಯಾಬ್ ಷೇರು ಬಿಡುಗಡೆ; ದಿನಾಂಕ, ಬೆಲೆ, ಹೂಡಿಕೆ ಮೊತ್ತ ತಿಳಿಯಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (61,440 ರುಪಾಯಿ)
  • ದುಬೈ: 2,572.50 ಡಿರಾಮ್ (58,500 ರುಪಾಯಿ)
  • ಅಮೆರಿಕ: 700 ಡಾಲರ್ (58,470 ರುಪಾಯಿ)
  • ಸಿಂಗಾಪುರ: 973 ಸಿಂಗಾಪುರ್ ಡಾಲರ್ (60,100 ರುಪಾಯಿ)
  • ಕತಾರ್: 2,625 ಕತಾರಿ ರಿಯಾಲ್ (60,130 ರೂ)
  • ಸೌದಿ ಅರೇಬಿಯಾ: 2,640 ಸೌದಿ ರಿಯಾಲ್ (58,790 ರುಪಾಯಿ)
  • ಓಮನ್: 277.50 ಒಮಾನಿ ರಿಯಾಲ್ (60,210 ರುಪಾಯಿ)
  • ಕುವೇತ್: 218 ಕುವೇತಿ ದಿನಾರ್ (59,390 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,050 ರೂ
  • ಚೆನ್ನೈ: 9,600 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 9,600 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 9,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್