Gold Silver Price on 11th June: ಬೆಳ್ಳಿ ಬೆಲೆ ಅಲ್ಪ ಏರಿಕೆ, ಹಲವೆಡೆ ಚಿನ್ನ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 11th: ಇಂದು ಮಂಗಳವಾರ ಬೆಳ್ಳಿ ಬೆಲೆ ಏರಿದೆ, ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,670 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 11th June: ಬೆಳ್ಳಿ ಬೆಲೆ ಅಲ್ಪ ಏರಿಕೆ, ಹಲವೆಡೆ ಚಿನ್ನ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jun 11, 2024 | 5:00 AM

ಬೆಂಗಳೂರು, ಜೂನ್ 11: ನಿನ್ನೆ ಭರ್ಜರಿ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಇಂದು ಬಹುತೇಕ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಚಿನ್ನದ ಬೆಲೆ ಭಾರತದಲ್ಲಿ ನಿನ್ನೆಯಷ್ಟೇ ಇದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದಿದೆ. ಅಮೆರಿಕದಲ್ಲಿ ಬಡ್ಡಿದರ ಸದ್ಯಕ್ಕೆ ಕಡಿಮೆಗೊಳ್ಳುವ ಸಾಧ್ಯತೆ ಕಾಣದೇ ಇರುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,700 ರೂ
  • ಚೆನ್ನೈ: 66,300 ರೂ
  • ಮುಂಬೈ: 65,700 ರೂ
  • ದೆಹಲಿ: 65,850 ರೂ
  • ಕೋಲ್ಕತಾ: 65,700 ರೂ
  • ಕೇರಳ: 65,700 ರೂ
  • ಅಹ್ಮದಾಬಾದ್: 65,750 ರೂ
  • ಜೈಪುರ್: 65,850 ರೂ
  • ಲಕ್ನೋ: 65,850 ರೂ
  • ಭುವನೇಶ್ವರ್: 65,700 ರೂ

ಇದನ್ನೂ ಓದಿ: ಪಿಎಂ ಕಿಸಾನ್ 17ನೇ ಕಂತು ಬಂತು; 20,000 ಕೋಟಿ ರೂ ಹಣ ಬಿಡುಗಡೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,420 ರಿಂಗಿಟ್ (60,510 ರುಪಾಯಿ)
  • ದುಬೈ: 2,572.50 ಡಿರಾಮ್ (58,480 ರುಪಾಯಿ)
  • ಅಮೆರಿಕ: 700 ಡಾಲರ್ (58,450 ರುಪಾಯಿ)
  • ಸಿಂಗಾಪುರ: 970 ಸಿಂಗಾಪುರ್ ಡಾಲರ್ (59,840 ರುಪಾಯಿ)
  • ಕತಾರ್: 2,625 ಕತಾರಿ ರಿಯಾಲ್ (60,110 ರೂ)
  • ಸೌದಿ ಅರೇಬಿಯಾ: 2,640 ಸೌದಿ ರಿಯಾಲ್ (58,780 ರುಪಾಯಿ)
  • ಓಮನ್: 274 ಒಮಾನಿ ರಿಯಾಲ್ (59,420 ರುಪಾಯಿ)
  • ಕುವೇತ್: 218 ಕುವೇತಿ ದಿನಾರ್ (59,360 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,040 ರೂ
  • ಚೆನ್ನೈ: 9,620 ರೂ
  • ಮುಂಬೈ: 9,170 ರೂ
  • ದೆಹಲಿ: 9,170 ರೂ
  • ಕೋಲ್ಕತಾ: 9,170 ರೂ
  • ಕೇರಳ: 9,620 ರೂ
  • ಅಹ್ಮದಾಬಾದ್: 9,170 ರೂ
  • ಜೈಪುರ್: 9,170 ರೂ
  • ಲಕ್ನೋ: 9,170 ರೂ
  • ಭುವನೇಶ್ವರ್: 9,620 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us