AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12 June: ಈ ವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿಕೆ ಮುಂದುವರಿಯುತ್ತಾ? ಇವತ್ತಿನ ದರಗಳ ಪಟ್ಟಿ ಇಲ್ಲಿದೆ

Bullion Market 2023, June 12th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,550 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12 June: ಈ ವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿಕೆ ಮುಂದುವರಿಯುತ್ತಾ? ಇವತ್ತಿನ ದರಗಳ ಪಟ್ಟಿ ಇಲ್ಲಿದೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 12, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಜೂನ್ 12ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,500 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,450 ರೂ ಇದೆ.
  • ಕಳೆದ ವಾರ ವಿಶ್ವ ಬಹುತೇಕ ಕಡೆ ಬೆಲೆ ಏರಿಕೆ ಆದರೂ ದುಬೈ ಮತ್ತು ಅಮೆರಿಕದಲ್ಲಿ ಚಿನ್ನದ ಬೆಲೆ 50,000 ರೂ ಒಳಗಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,575 ರೂ ಇದೆ.

ಬೆಂಗಳೂರು: ಕಳೆದ ಮೂರ್ನಾಲ್ಕು ವಾರಗಳಂತೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಕಳೆದ ವಾರವೂ ಏರಿಳಿತಗಳನ್ನು ಕಂಡಿವೆ. ವಾರದಲ್ಲಿ ಕೆಲ ದಿನಗಳ ಕಾಲ ಏರುವುದು, ಕೆಲ ದಿನ ಇಳಿಯುವುದು ಹೀಗೆ ಕಣ್ಣಾಮುಚ್ಚಾಳೆ ಆಟ ಮುಂದುವರಿದಿದೆ. ಹೀಗಾಗಿ, ಮೂರ್ನಾಲ್ಕು ವಾರಗಳಿಂದ ಬೆಲೆ ಬಹುತೇಕ ಅದೇ ಸ್ಥಿತಿಯಲ್ಲಿದೆ. ಈ ವಾರ ಚಿನ್ನದ ಬೆಲೆ ತುಸು ಏರುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,575 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿMoody’s: ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಶೇ 6ರಷ್ಟು ಮಾತ್ರ ಜಿಡಿಪಿ ವೃದ್ಧಿ: ಆರ್​ಬಿಐಗಿಂತ ಮೂಡೀಸ್ ಅಂದಾಜು ಭಿನ್ನ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 12ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,500 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,550 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,550 ರೂ
  • ಚೆನ್ನೈ: 55,900 ರೂ
  • ಮುಂಬೈ: 55,500 ರೂ
  • ದೆಹಲಿ: 55,650 ರೂ
  • ಕೋಲ್ಕತಾ: 55,500 ರೂ
  • ಕೇರಳ: 55,500 ರೂ
  • ಅಹ್ಮದಾಬಾದ್: 55,550 ರೂ
  • ಜೈಪುರ್: 55,650 ರೂ
  • ಲಕ್ನೋ: 55,650 ರೂ
  • ಭುವನೇಶ್ವರ್: 55,500 ರೂ

ಇದನ್ನೂ ಓದಿLIC Saral Pension: ಲಕ್ಷ ರೂ ಆದಾಯ ಬರುವಂತಾಗಬೇಕಾ? ಇಲ್ಲಿದೆ ಎಲ್​ಐಸಿ ಸರಳ್ ಪೆನ್ಷನ್ ಪ್ಲಾನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,526 ರುಪಾಯಿ)
  • ದುಬೈ: 2200 ಡಿರಾಮ್ (49,382 ರುಪಾಯಿ)
  • ಅಮೆರಿಕ: 600 ಡಾಲರ್ (49,467 ರುಪಾಯಿ)
  • ಸಿಂಗಾಪುರ: 820 ಸಿಂಗಾಪುರ್ ಡಾಲರ್ (50,312 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,287 ರೂ)
  • ಓಮನ್: 239.50 ಒಮಾನಿ ರಿಯಾಲ್ (51,366 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,525 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,575 ರೂ
  • ಚೆನ್ನೈ: 7,980 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,980 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,980 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು