AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13 June: ಈ ವಾರ ಚಿನ್ನ ಪ್ರಿಯರಿಗೆ ಖುಷಿ, ಬೆಳ್ಳಿ ಮತ್ತು ಚಿನ್ನದ ಬೆಲೆ ಇಳಿಕೆ; ಎಲ್ಲೆಲ್ಲಿ ಎಷ್ಟೆಷ್ಟಿದೆ ರೇಟು ಇಲ್ಲಿ ನೋಡಿ

Bullion Market 2023, June 13th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.30 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13 June: ಈ ವಾರ ಚಿನ್ನ ಪ್ರಿಯರಿಗೆ ಖುಷಿ, ಬೆಳ್ಳಿ ಮತ್ತು ಚಿನ್ನದ ಬೆಲೆ ಇಳಿಕೆ; ಎಲ್ಲೆಲ್ಲಿ ಎಷ್ಟೆಷ್ಟಿದೆ ರೇಟು ಇಲ್ಲಿ ನೋಡಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 13, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಜೂನ್ 13ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,400 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,430 ರೂ ಇದೆ.
  • ಕಳೆದ ವಾರ ವಿಶ್ವ ಬಹುತೇಕ ಕಡೆ ಬೆಲೆ ಏರಿಕೆ ಆದರೂ ದುಬೈ ಮತ್ತು ಅಮೆರಿಕದಲ್ಲಿ ಚಿನ್ನದ ಬೆಲೆ 50,000 ರೂ ಒಳಗಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,450 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,575 ರೂ ಇದೆ.

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Prices) ಈ ವಾರ ಇಳಿಕೆಯ ಹಾದಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,575 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Inflation Down: ಮೇ ತಿಂಗಳ ಹಣದುಬ್ಬರ ಶೇ. 4.25; ಇನ್ನಷ್ಟು ಕಡಿಮೆ ಆಯಿತು ಬೆಲೆ ಏರಿಕೆ ಮಟ್ಟ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 13ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 743 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,500 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,450 ರೂ
  • ಚೆನ್ನೈ: 55,800 ರೂ
  • ಮುಂಬೈ: 55,400 ರೂ
  • ದೆಹಲಿ: 55,450 ರೂ
  • ಕೋಲ್ಕತಾ: 55,400 ರೂ
  • ಕೇರಳ: 55,400 ರೂ
  • ಅಹ್ಮದಾಬಾದ್: 55,450 ರೂ
  • ಜೈಪುರ್: 55,550 ರೂ
  • ಲಕ್ನೋ: 55,550 ರೂ
  • ಭುವನೇಶ್ವರ್: 55,400 ರೂ

ಇದನ್ನೂ ಓದಿ: Crorepati Calculation: 10 ವರ್ಷದಲ್ಲಿ 1 ಕೋಟಿ ಹಣ ಗಳಿಸಲು ತಿಂಗಳಿಗೆ ಎಷ್ಟು ಹೂಡಿಕೆ ಮಾಡಬೇಕು? ಇಲ್ಲಿದೆ ಎಸ್​ಐಪಿ ಲೆಕ್ಕಾಚಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,526 ರುಪಾಯಿ)
  • ದುಬೈ: 2200 ಡಿರಾಮ್ (49,382 ರುಪಾಯಿ)
  • ಅಮೆರಿಕ: 600 ಡಾಲರ್ (49,467 ರುಪಾಯಿ)
  • ಸಿಂಗಾಪುರ: 820 ಸಿಂಗಾಪುರ್ ಡಾಲರ್ (50,312 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,287 ರೂ)
  • ಓಮನ್: 239.50 ಒಮಾನಿ ರಿಯಾಲ್ (51,366 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,525 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,575 ರೂ
  • ಚೆನ್ನೈ: 7,930 ರೂ
  • ಮುಂಬೈ: 7,430 ರೂ
  • ದೆಹಲಿ: 7,430 ರೂ
  • ಕೋಲ್ಕತಾ: 7,430 ರೂ
  • ಕೇರಳ: 7,930 ರೂ
  • ಅಹ್ಮದಾಬಾದ್: 7,430 ರೂ
  • ಜೈಪುರ್: 7,430 ರೂ
  • ಲಕ್ನೋ: 7,430 ರೂ
  • ಭುವನೇಶ್ವರ್: 7,930 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು