Gold Silver Price on 13th June: ಗುರುವಾರ ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಡೀಟೇಲ್ಸ್

Bullion Market 2024 June 13th: ಇಂದು ಗುರುವಾರ ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91.30 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,075 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13th June: ಗುರುವಾರ ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಡೀಟೇಲ್ಸ್
ಚಿನ್ನ

Updated on: Jun 13, 2024 | 5:00 AM

ಬೆಂಗಳೂರು, ಜೂನ್ 13: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 80 ಪೈಸೆ ಅಧಿಕಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,130 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,075 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 913 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 907.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,150 ರೂ
  • ಚೆನ್ನೈ: 66,800 ರೂ
  • ಮುಂಬೈ: 66,150 ರೂ
  • ದೆಹಲಿ: 66,300 ರೂ
  • ಕೋಲ್ಕತಾ: 66,150 ರೂ
  • ಕೇರಳ: 66,150 ರೂ
  • ಅಹ್ಮದಾಬಾದ್: 66,200 ರೂ
  • ಜೈಪುರ್: 66,300 ರೂ
  • ಲಕ್ನೋ: 66,300 ರೂ
  • ಭುವನೇಶ್ವರ್: 66,150 ರೂ

ಇದನ್ನೂ ಓದಿ: ಭಾರತದ ಹಣದುಬ್ಬರ ಶೇ. 4.75ಕ್ಕೆ ಇಳಿಕೆ; ಬಡ್ಡಿದರ ಕಡಿತಕ್ಕೆ ಮನಸು ಮಾಡುತ್ತಾ ಆರ್​ಬಿಐ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (60,890 ರುಪಾಯಿ)
  • ದುಬೈ: 2,595 ಡಿರಾಮ್ (58,990 ರುಪಾಯಿ)
  • ಅಮೆರಿಕ: 705 ಡಾಲರ್ (58,860 ರುಪಾಯಿ)
  • ಸಿಂಗಾಪುರ: 977 ಸಿಂಗಾಪುರ್ ಡಾಲರ್ (60,550 ರುಪಾಯಿ)
  • ಕತಾರ್: 2,645 ಕತಾರಿ ರಿಯಾಲ್ (60,570 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,210 ರುಪಾಯಿ)
  • ಓಮನ್: 276.50 ಒಮಾನಿ ರಿಯಾಲ್ (59,960 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,970 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,075 ರೂ
  • ಚೆನ್ನೈ: 9,580 ರೂ
  • ಮುಂಬೈ: 9,130 ರೂ
  • ದೆಹಲಿ: 9,130 ರೂ
  • ಕೋಲ್ಕತಾ: 9,130 ರೂ
  • ಕೇರಳ: 9,580 ರೂ
  • ಅಹ್ಮದಾಬಾದ್: 9,130 ರೂ
  • ಜೈಪುರ್: 9,130 ರೂ
  • ಲಕ್ನೋ: 9,130 ರೂ
  • ಭುವನೇಶ್ವರ್: 9,580 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us