AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 14 June: ಬೆಳ್ಳಿ ಬೆಲೆ ಮತ್ತಷ್ಟು ಅಗ್ಗ; ದುಬೈನಲ್ಲಿ ಚಿನ್ನದ ಬೆಲೆ ಇಳಿಕೆ; ವಿವಿಧೆಡೆ ಎಷ್ಟಿದೆ ಚಿನ್ನ, ಬೆಳ್ಳಿ ದರ, ಇಲ್ಲಿದೆ ಡೀಟೇಲ್ಸ್

Bullion Market 2023, June 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14 June: ಬೆಳ್ಳಿ ಬೆಲೆ ಮತ್ತಷ್ಟು ಅಗ್ಗ; ದುಬೈನಲ್ಲಿ ಚಿನ್ನದ ಬೆಲೆ ಇಳಿಕೆ; ವಿವಿಧೆಡೆ ಎಷ್ಟಿದೆ ಚಿನ್ನ, ಬೆಳ್ಳಿ ದರ, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 14, 2023 | 5:20 AM

Share

ಬೆಂಗಳೂರು: ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ (Gold Prices) ಸದ್ಯ ಯಥಾಸ್ಥಿತಿಯಲ್ಲಿದೆ. ದುಬೈನಲ್ಲಿ ತುಸು ಕಡಿಮೆ ಆಗಿದ್ದು ಬೇರೆಡೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿFD: ಒಂದೇ ಎಫ್​ಡಿ ಒಳ್ಳೆಯದೋ, ಸಣ್ಣ ಮೊತ್ತದ ವಿವಿಧ ಠೇವಣಿಗಳು ಉತ್ತಮವಾ? ಬಡ್ಡಿ ದರ, ಲಿಕ್ವಿಡಿಟಿ ಇತ್ಯಾದಿ ಸಂಗತಿ ಗಮನಿಸಿ ನಿರ್ಧರಿಸಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 14ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,500 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,450 ರೂ
  • ಚೆನ್ನೈ: 55,800 ರೂ
  • ಮುಂಬೈ: 55,400 ರೂ
  • ದೆಹಲಿ: 55,450 ರೂ
  • ಕೋಲ್ಕತಾ: 55,400 ರೂ
  • ಕೇರಳ: 55,400 ರೂ
  • ಅಹ್ಮದಾಬಾದ್: 55,450 ರೂ
  • ಜೈಪುರ್: 55,550 ರೂ
  • ಲಕ್ನೋ: 55,550 ರೂ
  • ಭುವನೇಶ್ವರ್: 55,400 ರೂ

ಇದನ್ನೂ ಓದಿArecanut Price 13 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,526 ರುಪಾಯಿ)
  • ದುಬೈ: 2202.50 ಡಿರಾಮ್ (49,389 ರುಪಾಯಿ)
  • ಅಮೆರಿಕ: 600 ಡಾಲರ್ (49,467 ರುಪಾಯಿ)
  • ಸಿಂಗಾಪುರ: 820 ಸಿಂಗಾಪುರ್ ಡಾಲರ್ (50,312 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,287 ರೂ)
  • ಓಮನ್: 239.50 ಒಮಾನಿ ರಿಯಾಲ್ (51,366 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,525 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 7,920 ರೂ
  • ಮುಂಬೈ: 7,410 ರೂ
  • ದೆಹಲಿ: 7,410 ರೂ
  • ಕೋಲ್ಕತಾ: 7,410 ರೂ
  • ಕೇರಳ: 7,920 ರೂ
  • ಅಹ್ಮದಾಬಾದ್: 7,410 ರೂ
  • ಜೈಪುರ್: 7,410 ರೂ
  • ಲಕ್ನೋ: 7,410 ರೂ
  • ಭುವನೇಶ್ವರ್: 7,920 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ