Gold Silver Price on 16th June: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 16th: ಚಿನ್ನ, ಬೆಳ್ಳಿ ಎರಡೂ ಬೆಲೆಗಳಲ್ಲಿ ಇಂದು ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,890 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 90.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,900 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,040 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 16th June: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jun 16, 2024 | 5:00 AM

ಬೆಂಗಳೂರು, ಜೂನ್ 16: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ತುಸು ತುಸುವೇ ಇಳಿಕೆಯ ಹಾದಿಯಲ್ಲಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 1.20 ರೂನಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 70 ರೂನಷ್ಟು ಕಡಿಮೆ ಆಗಿದೆ. ಫೆಡರಲ್ ರಿಸರ್ವ್ ಈ ವರ್ಷ ಬಡ್ಡಿದರ ಕಡಿತ ಮಾಡದಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುತ್ತಿದೆ. ಬೆಲೆಯೂ ಸ್ವಲ್ಪ ಸ್ವಲ್ಪ ಇಳಿಕೆ ಕಾಣಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,040 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 904 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,900 ರೂ
  • ಚೆನ್ನೈ: 66,500 ರೂ
  • ಮುಂಬೈ: 65,900 ರೂ
  • ದೆಹಲಿ: 66,050 ರೂ
  • ಕೋಲ್ಕತಾ: 66,150 ರೂ
  • ಕೇರಳ: 66,150 ರೂ
  • ಅಹ್ಮದಾಬಾದ್: 65,950 ರೂ
  • ಜೈಪುರ್: 66,050 ರೂ
  • ಲಕ್ನೋ: 66,050 ರೂ
  • ಭುವನೇಶ್ವರ್: 65,900 ರೂ

ಇದನ್ನೂ ಓದಿ: ITR filing: ಇನ್ಕಮ್ ಟ್ಯಾಕ್ಸ್ ರಿಟರ್ನ್ ಫೈಲ್ ಮಾಡುವುದು ಹೇಗೆ? ಇಲ್ಲಿದೆ ಕ್ರಮ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (60,920 ರುಪಾಯಿ)
  • ದುಬೈ: 2,597.50 ಡಿರಾಮ್ (59,090 ರುಪಾಯಿ)
  • ಅಮೆರಿಕ: 705 ಡಾಲರ್ (58,900 ರುಪಾಯಿ)
  • ಸಿಂಗಾಪುರ: 979 ಸಿಂಗಾಪುರ್ ಡಾಲರ್ (60,430 ರುಪಾಯಿ)
  • ಕತಾರ್: 2,640 ಕತಾರಿ ರಿಯಾಲ್ (60,510 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,240 ರುಪಾಯಿ)
  • ಓಮನ್: 278.50 ಒಮಾನಿ ರಿಯಾಲ್ (60,440 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,930 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,040 ರೂ
  • ಚೆನ್ನೈ: 9,500 ರೂ
  • ಮುಂಬೈ: 9,050 ರೂ
  • ದೆಹಲಿ: 9,050 ರೂ
  • ಕೋಲ್ಕತಾ: 9,050 ರೂ
  • ಕೇರಳ: 9,500 ರೂ
  • ಅಹ್ಮದಾಬಾದ್: 9,050 ರೂ
  • ಜೈಪುರ್: 9,050 ರೂ
  • ಲಕ್ನೋ: 9,050 ರೂ
  • ಭುವನೇಶ್ವರ್: 9,500 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us