AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 18th June: ಚಿನ್ನದ ಬೆಲೆ ತುಸು ಇಳಿಕೆ, ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಪಟ್ಟಿ

Bullion Market 2024 June 18th: ಚಿನ್ನದ ಬೆಲೆ ಭಾರತ ಹಾಗೂ ವಿದೇಶದ ಕೆಲವೆಡೆ ಇಂದು ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,330 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 18th June: ಚಿನ್ನದ ಬೆಲೆ ತುಸು ಇಳಿಕೆ, ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 18, 2024 | 5:00 AM

Share

ಬೆಂಗಳೂರು, ಜೂನ್ 18: ಚಿನ್ನದ ಬೆಲೆಯಲ್ಲಿ (Gold and silver Rates) ಇಂದು ಮಂಗಳವಾರು ತುಸು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಭಾರತದಾದ್ಯಂತ ಬದಲಾವಣೆ ಕಂಡಿಲ್ಲ. ಚಿನ್ನದ ಬೆಲೆ ವಿದೇಶಗಳಲ್ಲಿ ಕೆಲವೆಡೆ ಯಥಾಸ್ಥಿತಿಯಲ್ಲಿದೆ. ಅಮೆರಿಕ, ದುಬೈ ಮೊದಲಾದೆಡೆ ಬೆಲೆ ಬದಲಾವಣೆ ಇಲ್ಲ. ಭಾರತದ ಬಹುತೇಕ ಕಡೆ ತುಸು ಅಗ್ಗಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,300 ರೂ
  • ಚೆನ್ನೈ: 66,900 ರೂ
  • ಮುಂಬೈ: 66,300 ರೂ
  • ದೆಹಲಿ: 66,450 ರೂ
  • ಕೋಲ್ಕತಾ: 66,300 ರೂ
  • ಕೇರಳ: 66,300 ರೂ
  • ಅಹ್ಮದಾಬಾದ್: 66,350 ರೂ
  • ಜೈಪುರ್: 66,450 ರೂ
  • ಲಕ್ನೋ: 66,450 ರೂ
  • ಭುವನೇಶ್ವರ್: 66,300 ರೂ

ಇದನ್ನೂ ಓದಿ: ಈ ವಾರ ಮೂರು ಐಪಿಒಗಳಿವೆ; ಡೀ, ಸ್ಟಾನ್ಲೀ, ಆಕ್ಮೆಗಳಿಂದ ಷೇರು ಆಫರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,630 ರುಪಾಯಿ)
  • ದುಬೈ: 2,605 ಡಿರಾಮ್ (59,260 ರುಪಾಯಿ)
  • ಅಮೆರಿಕ: 715 ಡಾಲರ್ (59,740 ರುಪಾಯಿ)
  • ಸಿಂಗಾಪುರ: 982 ಸಿಂಗಾಪುರ್ ಡಾಲರ್ (60,640 ರುಪಾಯಿ)
  • ಕತಾರ್: 2,650 ಕತಾರಿ ರಿಯಾಲ್ (59,230 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,230 ರುಪಾಯಿ)
  • ಓಮನ್: 277.50 ಒಮಾನಿ ರಿಯಾಲ್ (60,220 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,920 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,560 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,560 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,560 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ