Gold Silver Price on 19 June: ದುಬೈನಲ್ಲಿ ಚಿನ್ನದ ಬೆಲೆ ಇಳಿಕೆ; ಭಾರತ ಹಾಗು ವಿದೇಶಗಳಲ್ಲಿ ಎಷ್ಟಿದೆ ಇವತ್ತಿನ ಚಿನ್ನ ಮತ್ತು ಬೆಳ್ಳಿ ದರ, ಇಲ್ಲಿದೆ ಮಾಹಿತಿ

Bullion Market 2023, June 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19 June: ದುಬೈನಲ್ಲಿ ಚಿನ್ನದ ಬೆಲೆ ಇಳಿಕೆ; ಭಾರತ ಹಾಗು ವಿದೇಶಗಳಲ್ಲಿ ಎಷ್ಟಿದೆ ಇವತ್ತಿನ ಚಿನ್ನ ಮತ್ತು ಬೆಳ್ಳಿ ದರ, ಇಲ್ಲಿದೆ ಮಾಹಿತಿ
ಚಿನ್ನ

Updated on: Jun 19, 2023 | 5:00 AM

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಮತ್ತೆ ಅನಿಶ್ಚಿತ ಸ್ಥಿತಿಗೆ ಜಾರಿವೆ. ಕಳೆದ ವಾರ ಸತತವಾಗಿ ಇಳಿಕೆ ಕಂಡು ಮತ್ತೆ ದಿಢೀರ್ ಮೇಲೇರಿದ್ದ ಚಿನ್ನದ ಬೆಲೆ ಈ ವಾರ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಅಂದಾಜಿಗೆ ನಿಲುಕದಂತಾಗಿದೆ. ಅಮೆರಿಕದ ಸೆಂಟ್ರಲ್ ಬ್ಯಾಂಕ್ ತನ್ನ ಬಡ್ಡಿ ದರ ಏರಿಕೆಗೆ ಅಲ್ಪ ವಿರಾಮ ಹಾಕಿದ್ದು, ಹಾಗೂ ಮುಂದಿನ ದಿನಗಳಲ್ಲಿ ಎರಡು ಬಾರಿ ಬಡ್ಡಿ ಏರಿಕೆ ಮಾಡುವುದಾಗಿ ಹೇಳಿದ್ದು ಹೂಡಿಕೆದಾರರನ್ನು ಗೊಂದಲಕ್ಕೆ ಕೆಡವಿದಂತಿದೆ. ಸದ್ಯದ ಮಟ್ಟಿಗೆ ಈ ವಾರವೂ ಇದೇ ಗೊಂದಲದಲ್ಲಿ ಚಿನ್ನದ ಬೆಲೆ ಏರಿಳಿತವಾಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,475 ರುಪಾಯಿಯಲ್ಲಿ ಇದೆ.

ಯುಎಇ ಸೇರಿದಂತೆ ಕೆಲವಾರು ದೇಶಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ದುಬೈನಲ್ಲಿ ಚಿನ್ನದ ಬೆಲೆ ಮತ್ತೆ 49,000 ರೂ ಗಡಿಯೊಳಗೆ ಬಂದಿದೆ. ಆದರೆ, ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿMarket Value: 6 ದೊಡ್ಡ ಸಂಸ್ಥೆಗಳಿಗೆ ಒಂದು ವಾರದಲ್ಲಿ ಹೆಚ್ಚಾಯಿತು 1.13 ಲಕ್ಷ ಕೋಟಿ ರೂ ಷೇರುಸಂಪತ್ತು; ರಿಲಾಯನ್ಸ್ ಇಂಡಸ್ಟ್ರೀಸ್​ಗೆ ಭರ್ಜರಿ ಲಾಭ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 74.75 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 55,420 ರೂ
  • ಮುಂಬೈ: 55,100 ರೂ
  • ದೆಹಲಿ: 55,250 ರೂ
  • ಕೋಲ್ಕತಾ: 55,100 ರೂ
  • ಕೇರಳ: 55,100 ರೂ
  • ಅಹ್ಮದಾಬಾದ್: 55,150 ರೂ
  • ಜೈಪುರ್: 55,250 ರೂ
  • ಲಕ್ನೋ: 55,250 ರೂ
  • ಭುವನೇಶ್ವರ್: 55,100 ರೂ

ಇದನ್ನೂ ಓದಿRs 500 Notes: ಮುದ್ರಣಗೊಂಡ ಕೋಟ್ಯಂತರ 500 ರೂ ನೋಟುಗಳು ಆರ್​ಬಿಐಗೆ ತಲುಪುವ ಮುನ್ನವೇ ಕಾಣೆಯಾಗಿವೆಯಾ? ಆರ್​ಬಿಐ ಏನು ಹೇಳುತ್ತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (51,132 ರುಪಾಯಿ)
  • ದುಬೈ: 2195 ಡಿರಾಮ್ (48,952 ರುಪಾಯಿ)
  • ಅಮೆರಿಕ: 600 ಡಾಲರ್ (49,282 ರುಪಾಯಿ)
  • ಸಿಂಗಾಪುರ: 816 ಸಿಂಗಾಪುರ್ ಡಾಲರ್ (49,895 ರುಪಾಯಿ)
  • ಕತಾರ್: 2,260 ಕತಾರಿ ರಿಯಾಲ್ (50,845 ರೂ)
  • ಓಮನ್: 239.50 ಒಮಾನಿ ರಿಯಾಲ್ (50,859 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,053 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,475 ರೂ
  • ಚೆನ್ನೈ: 7,880 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,880 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,880 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us