Gold Silver Price on 19th June: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ತುಸು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 19th: ಚಿನ್ನದ ಬೆಲೆ ಸತತವಾಗಿ ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19th June: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ತುಸು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jun 19, 2024 | 5:00 AM

ಬೆಂಗಳೂರು, ಜೂನ್ 19: ಚಿನ್ನದ ಬೆಲೆಯಲ್ಲಿ (Gold and silver Rates) ಇಂದು ಕೂಡ ಇಳಿಕೆ ಆಗಿದೆ. ಗ್ರಾಮ್​ಗೆ ಹತ್ತು ರೂನಷ್ಟು ಬೆಲೆ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಅಮೆರಿಕದ ಆರ್ಥಿಕ ದರದ ವರದಿ ಬಂದ ಬಳಿಕ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಹೆಚ್ಚು ವ್ಯತ್ಯಯಗಳಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,200 ರೂ
  • ಚೆನ್ನೈ: 66,950 ರೂ
  • ಮುಂಬೈ: 66,200 ರೂ
  • ದೆಹಲಿ: 66,350 ರೂ
  • ಕೋಲ್ಕತಾ: 66,200 ರೂ
  • ಕೇರಳ: 66,200 ರೂ
  • ಅಹ್ಮದಾಬಾದ್: 66,250 ರೂ
  • ಜೈಪುರ್: 66,350 ರೂ
  • ಲಕ್ನೋ: 66,350 ರೂ
  • ಭುವನೇಶ್ವರ್: 66,200 ರೂ

ಇದನ್ನೂ ಓದಿ: ನಿಮ್ಮದು ವರ್ಷಕ್ಕೆ 12 ಲಕ್ಷ ರೂ ಆದಾಯ ಇದ್ದರೆ ಎಷ್ಟು ತೆರಿಗೆ ಕಟ್ಟಬೇಕು? ಟ್ಯಾಕ್ಸ್ ಸ್ಲ್ಯಾಬ್ ಹೇಗೆ ಅನ್ವಯ ಆಗುತ್ತೆ ನೋಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (61,240 ರುಪಾಯಿ)
  • ದುಬೈ: 2,592.50 ಡಿರಾಮ್ (58,890 ರುಪಾಯಿ)
  • ಅಮೆರಿಕ: 705 ಡಾಲರ್ (58,820 ರುಪಾಯಿ)
  • ಸಿಂಗಾಪುರ: 976 ಸಿಂಗಾಪುರ್ ಡಾಲರ್ (60,130 ರುಪಾಯಿ)
  • ಕತಾರ್: 2,640 ಕತಾರಿ ರಿಯಾಲ್ (60,430 ರೂ)
  • ಸೌದಿ ಅರೇಬಿಯಾ: 2,650 ಸೌದಿ ರಿಯಾಲ್ (58,930 ರುಪಾಯಿ)
  • ಓಮನ್: 277.50 ಒಮಾನಿ ರಿಯಾಲ್ (60,140 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,830 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,600 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 9,600 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 9,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us