AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 1 June: ಚಿನ್ನ ಮತ್ತು ಬೆಳ್ಳಿ ಬೆಲೆ ಒಮ್ಮೆಲೆ ಏರಿಕೆ; ಭಾರತ ಹಾಗು ಇತರೆಡೆ ಸ್ವರ್ಣಬೆಲೆ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್

Bullion Market 2023, June 1st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,930 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 1 June: ಚಿನ್ನ ಮತ್ತು ಬೆಳ್ಳಿ ಬೆಲೆ ಒಮ್ಮೆಲೆ ಏರಿಕೆ; ಭಾರತ ಹಾಗು ಇತರೆಡೆ ಸ್ವರ್ಣಬೆಲೆ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 01, 2023 | 4:54 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಜೂನ್ 1ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,850 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,680 ರೂ ಇದೆ.
  • ಭಾರತೀಯರು ಹೆಚ್ಚಾಗಿ ನೆಲಸಿರುವ ಅಮೆರಿಕ, ಸಿಂಗಾಪುರ, ಅರಬ್ ಮೊದಲಾದ ಕಡೆ ಚಿನ್ನದ ಬೆಲೆಗಳು ಏರಿಕೆ ಕಾಣುತ್ತಿವೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,900 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂ ಇದೆ.

ಬೆಂಗಳೂರು: ಹಲವು ದಿನಗಳಿಂದ ಬಹುತೇಕ ಇಳಿಕೆಯ ಖುಷಿಯಲ್ಲಿದ್ದ ಚಿನ್ನದ ಪ್ರೇಮಿಗಳಿಗೆ ಶಾಕ್ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಭರ್ಜರಿಯಾಗಿ ಏರಿವೆ. ಭಾರತ ಹಾಗೂ ವಿದೇಶಗಳ ಚಿನಿವಾರ ಪೇಟೆಗಳಲ್ಲಿ ಚಿನ್ನದ ಬೆಲೆ ಒಮ್ಮೆಲೇ ಹಿಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,680 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿGDP Data: ಇಗೋ ನೋಡಿ ಭಾರತದ ಆರ್ಥಿಕ ಬೆಳವಣಿಗೆ; ಕೊನೆಯ ಕ್ವಾರ್ಟರ್​ನಲ್ಲಿ ಶೇ. 6.1, ಇಡೀ ವರ್ಷದಲ್ಲಿ ಶೇ. 7.2 ಜಿಡಿಪಿ ವೃದ್ಧಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 1ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 768 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,900 ರೂ
  • ಚೆನ್ನೈ: 56,450 ರೂ
  • ಮುಂಬೈ: 55,850 ರೂ
  • ದೆಹಲಿ: 56,000 ರೂ
  • ಕೋಲ್ಕತಾ: 55,850 ರೂ
  • ಕೇರಳ: 55,850 ರೂ
  • ಅಹ್ಮದಾಬಾದ್: 55,900 ರೂ
  • ಜೈಪುರ್: 56,000 ರೂ
  • ಲಕ್ನೋ: 56,000 ರೂ
  • ಭುವನೇಶ್ವರ್: 55,850 ರೂ

ಇದನ್ನೂ ಓದಿArecanut Price: 31 ಮೇ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (51,239 ರುಪಾಯಿ)
  • ದುಬೈ: 2195 ಡಿರಾಮ್ (49,415 ರುಪಾಯಿ)
  • ಅಮೆರಿಕ: 600 ಡಾಲರ್ (49,605 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,238 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,447 ರೂ)
  • ಓಮನ್: 240 ಒಮಾನಿ ರಿಯಾಲ್ (51,567 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,521 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,680 ರೂ
  • ಮುಂಬೈ: 7,680 ರೂ
  • ದೆಹಲಿ: 7,280 ರೂ
  • ಕೋಲ್ಕತಾ: 7,280 ರೂ
  • ಕೇರಳ: 7,680 ರೂ
  • ಅಹ್ಮದಾಬಾದ್: 7,280 ರೂ
  • ಜೈಪುರ್: 7,280 ರೂ
  • ಲಕ್ನೋ: 7,280 ರೂ
  • ಭುವನೇಶ್ವರ್: 7,680 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​