ಬೆಂಗಳೂರು: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ತುಸು ಇಳಿಕೆ ಕಾಣುತ್ತಿರುವ ಸೂಚನೆ ಇದೆ. ಆದರೂ ಜಾಗತಿಕವಾಗಿ ಚಿನಿವಾರಪೇಟೆಯಲ್ಲಿ ಅನಿಶ್ಚಿತತೆ ಮನೆಮಾಡಿದೆ. ಚಿನ್ನದ ಬೆಲೆ ಎಲ್ಲೆಡೆ ಅಲ್ಪ ಇಳಿಕೆಯಾಗಿದೆ. ದುಬೈನಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿರುವುದು ಗಮನಾರ್ಹ. ಅಮೆರಿಕದಲ್ಲಿ ಯಥಾಸ್ಥಿತಿ ಮುಂದುವರಿದೆ. ಭಾರತದ ವಿವಿಧೆಡೆ ಚಿನ್ನ ತುಸು ಇಳಿದಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,070 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,120 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,475 ರುಪಾಯಿಯಲ್ಲಿ ಇದೆ.
ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Aadhaar PAN: ನಿಮ್ಮ ಪ್ಯಾನ್ ನಂಬರ್ ಬೇರೆಯವರ ಆಧಾರ್ಗೆ ಲಿಂಕ್ ಆಗಿದೆಯಾ? ಸರಿಪಡಿಸಲು ಹೀಗೆ ಮಾಡಿ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Fertilizer Subsidy: ರೈತರು ರಸಗೊಬ್ಬರ ಬಳಕೆ ಕಡಿಮೆ ಮಾಡಿದರೆ ರಾಜ್ಯಗಳಿಗೆ ಲಾಭ; ಕೇಂದ್ರದಿಂದ ಮಾಸ್ಟರ್ಪ್ಲಾನ್
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ