Gold Silver Price on 20th June: ಭಾರತದಲ್ಲಿ ಬೆಳ್ಳಿ ಬೆಲೆ ಇಳಿಕೆ, ವಿದೇಶ ಮಾರುಕಟ್ಟೆಯಲ್ಲಿ ಚಿನ್ನ ಅಲ್ಪ ಏರಿಕೆ

Bullion Market 2024 June 20th: ನಿನ್ನೆ ಏರಿದ್ದ ಬೆಳ್ಳಿ ಬೆಲೆ ಇಂದು ಗುರುವಾರ ತುಸು ತಗ್ಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 20th June: ಭಾರತದಲ್ಲಿ ಬೆಳ್ಳಿ ಬೆಲೆ ಇಳಿಕೆ, ವಿದೇಶ ಮಾರುಕಟ್ಟೆಯಲ್ಲಿ ಚಿನ್ನ ಅಲ್ಪ ಏರಿಕೆ
ಚಿನ್ನ

Updated on: Jun 20, 2024 | 5:00 AM

ಬೆಂಗಳೂರು, ಜೂನ್ 20: ಇಂದು ಗುರುವಾರ ಬೆಳ್ಳಿ ಬೆಲೆ (Gold and silver Rates) ಇಳಿಕೆಯಾದರೆ, ವಿದೇಶಗಳ ಕೆಲವೆಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಇಂದು ಮತ್ತು ನಾಳೆ ಚಿನ್ನದ ಬೆಲೆ ಭಾರತದಲ್ಲೂ ಹೆಚ್ಚಾಗುವ ನಿರೀಕ್ಷೆ ಇದೆ. ಅಮೆರಿಕದ ಮೊದಲಾದ ಕಡೆ ಚಿನ್ನದ ಬೆಲೆ ಅಲ್ಪ ಪ್ರಮಾಣದಲ್ಲಿ ಮಾತ್ರ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,200 ರೂ
  • ಚೆನ್ನೈ: 66,960 ರೂ
  • ಮುಂಬೈ: 66,200 ರೂ
  • ದೆಹಲಿ: 66,350 ರೂ
  • ಕೋಲ್ಕತಾ: 66,200 ರೂ
  • ಕೇರಳ: 66,200 ರೂ
  • ಅಹ್ಮದಾಬಾದ್: 66,250 ರೂ
  • ಜೈಪುರ್: 66,350 ರೂ
  • ಲಕ್ನೋ: 66,350 ರೂ
  • ಭುವನೇಶ್ವರ್: 66,200 ರೂ

ಇದನ್ನೂ ಓದಿ: ಒಂದು ವರ್ಷದಲ್ಲಿ ಡಬಲ್ ಲಾಭ ಕೊಟ್ಟಿವೆ ಈ ಪಿಎಸ್​ಯು ಮ್ಯೂಚುವಲ್ ಫಂಡ್​ಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (61,330 ರುಪಾಯಿ)
  • ದುಬೈ: 2,612.50 ಡಿರಾಮ್ (59,350 ರುಪಾಯಿ)
  • ಅಮೆರಿಕ: 710 ಡಾಲರ್ (59,240 ರುಪಾಯಿ)
  • ಸಿಂಗಾಪುರ: 980 ಸಿಂಗಾಪುರ್ ಡಾಲರ್ (60,540 ರುಪಾಯಿ)
  • ಕತಾರ್: 2,660 ಕತಾರಿ ರಿಯಾಲ್ (60,880 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,600 ರುಪಾಯಿ)
  • ಓಮನ್: 278 ಒಮಾನಿ ರಿಯಾಲ್ (60,250 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,880 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,560 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,560 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,560 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us