ಬೆಂಗಳೂರು: ಚಿನ್ನದ ಬೆಲೆ (Gold and Silver Prices) ಈ ವಾರ ಇನ್ನಷ್ಟು ಇಳಿದಿದೆ. ಬೆಂಗಳೂರು ಹಾಗೂ ದೇಶದ ಇತರೆಡೆ ಬಹುತೇಕ ಚಿನ್ನದ ಬೆಲೆಗಳು ಇಳಿದಿವೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ 10 ಗ್ರಾಮ್ ಚಿನ್ನದ ಬೆಲೆ 150 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಂಗಳೂರು ಹೊರತುಪಡಿಸಿ ಬೇರೆ ಕಡೆ ಬೆಳ್ಳಿ ಬೆಲೆ ಏರಿಕೆ ಕಂಡಿದೆ. ದುಬೈನಲ್ಲಿ ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಅಮೆರಿಕದಲ್ಲೂ ಯಥಾಸ್ಥಿತಿ ಮುಂದುವರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,475 ರುಪಾಯಿಯಲ್ಲಿ ಇದೆ.
ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Arecanut Price 20 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಇದನ್ನೂ ಓದಿ: Pixel In India: ಆ್ಯಪಲ್ ಆಯ್ತು, ಈಗ ಗೂಗಲ್ ಸರದಿ; ಚೀನಾ ಬಿಟ್ಟು ಭಾರತದಲ್ಲಿ ಪಿಕ್ಸೆಲ್ ತಯಾರಿಕೆಗೆ ಆಲೋಚನೆ?
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ