AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 21st June: ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 21st: ಇಂದು ಶುಕ್ರವಾರ ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,440 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 92.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,400 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,275 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21st June: ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 21, 2024 | 4:19 PM

Share

ಬೆಂಗಳೂರು, ಜೂನ್ 21: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಕೂಡ ಇಂದು ಶುಕ್ರವಾರ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಅಧಿಕಗೊಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ ಒಂದೂವರೆ ರೂನಷ್ಟು ಹೆಚ್ಚಾಗಿದೆ. ವಿದೇಶಗಳಲ್ಲೂ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 927.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,400 ರೂ
  • ಚೆನ್ನೈ: 67,000 ರೂ
  • ಮುಂಬೈ: 66,400 ರೂ
  • ದೆಹಲಿ: 66,550 ರೂ
  • ಕೋಲ್ಕತಾ: 66,400 ರೂ
  • ಕೇರಳ: 66,400 ರೂ
  • ಅಹ್ಮದಾಬಾದ್: 66,450 ರೂ
  • ಜೈಪುರ್: 66,550 ರೂ
  • ಲಕ್ನೋ: 66,550 ರೂ
  • ಭುವನೇಶ್ವರ್: 66,400 ರೂ

ಇದನ್ನೂ ಓದಿ: ಟ್ಯಾಕ್ಸ್ ಎಕ್ಸೆಂಪ್ಷನ್, ಟ್ಯಾಕ್ಸ್ ಡಿಡಕ್ಷನ್, ಟ್ಯಾಕ್ಸ್ ರಿಬೇಟ್ ಎಂದರೇನು? ಅವುಗಳ ಮಧ್ಯೆ ವ್ಯತ್ಯಾಸವೇನು, ತಿಳಿಯಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,780 ರುಪಾಯಿ)
  • ದುಬೈ: 2,615 ಡಿರಾಮ್ (59,530 ರುಪಾಯಿ)
  • ಅಮೆರಿಕ: 710 ಡಾಲರ್ (59,370 ರುಪಾಯಿ)
  • ಸಿಂಗಾಪುರ: 985 ಸಿಂಗಾಪುರ್ ಡಾಲರ್ (60,870 ರುಪಾಯಿ)
  • ಕತಾರ್: 2,670 ಕತಾರಿ ರಿಯಾಲ್ (61,250 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,950 ರುಪಾಯಿ)
  • ಓಮನ್: 279.50 ಒಮಾನಿ ರಿಯಾಲ್ (60,710 ರುಪಾಯಿ)
  • ಕುವೇತ್: 222 ಕುವೇತಿ ದಿನಾರ್ (60,530 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,275 ರೂ
  • ಚೆನ್ನೈ: 9,710 ರೂ
  • ಮುಂಬೈ: 9,250 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 9,710 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 9,710 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Fri, 21 June 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ