AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22 June: ಬೆಂಗಳೂರಲ್ಲಿ ಬೆಳ್ಳಿ ಭರ್ಜರಿ ಇಳಿಕೆ, ದೇಶಾದ್ಯಂತ ಚಿನ್ನ ಇನ್ನಷ್ಟು ಅಗ್ಗ; ವಿದೇಶಗಳಲ್ಲೂ ಬೆಲೆ ಸುಗ್ಗಿ

Bullion Market 2023, June 22nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,670 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.00 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22 June: ಬೆಂಗಳೂರಲ್ಲಿ ಬೆಳ್ಳಿ ಭರ್ಜರಿ ಇಳಿಕೆ, ದೇಶಾದ್ಯಂತ ಚಿನ್ನ ಇನ್ನಷ್ಟು ಅಗ್ಗ; ವಿದೇಶಗಳಲ್ಲೂ ಬೆಲೆ ಸುಗ್ಗಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 22, 2023 | 5:22 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಇಳಿಕೆಯ ಹಾದಿಯಲ್ಲಿ ಮುಂದುವರಿದಿವೆ. ಅಮೆರಿಕ, ದುಬೈನಲ್ಲಿ ಚಿನ್ನದ ಬೆಲೆ 49,000 ರೂ ಒಳಗೆ ಬಂದಿವೆ. ಸಿಂಗಾಪುರ, ಕುವೇತ್​ನಲ್ಲಿ ಬೆಲೆ 49 ಸಾವಿರ ರೂ ಒಳಗಿದೆ. ಭಾರತದಲ್ಲಿ ಎಲ್ಲೆಡೆ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಳಿಕೆ ಆಗಿವೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಭರ್ಜರಿಯಾಗಿ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿRecord Bonus: ಪಾಲಿಸಿದಾರರಿಗೆ 1,183 ಕೋಟಿ ರೂ ಮೊತ್ತದ ಬೋನಸ್ ಘೋಷಿಸಿದ ಟಾಟಾ ಎಐಎ ಲೈಫ್ ಇನ್ಷೂರೆನ್ಸ್

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 22ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,700 ರೂ
  • ಚೆನ್ನೈ: 55,050 ರೂ
  • ಮುಂಬೈ: 54,700 ರೂ
  • ದೆಹಲಿ: 54,850 ರೂ
  • ಕೋಲ್ಕತಾ: 54,700 ರೂ
  • ಕೇರಳ: 54,700 ರೂ
  • ಅಹ್ಮದಾಬಾದ್: 54,700 ರೂ
  • ಜೈಪುರ್: 54,850 ರೂ
  • ಲಕ್ನೋ: 54,850 ರೂ
  • ಭುವನೇಶ್ವರ್: 54,700 ರೂ

ಇದನ್ನೂ ಓದಿEPF Claim: ಉದ್ಯೋಗಿ ಸತ್ತಾಗ ಅವರ ಇಪಿಎಫ್ ಹಣಕ್ಕೆ ನಾಮಿನಿ ಕ್ಲೈಮ್ ಮಾಡುವುದು ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,179 ರುಪಾಯಿ)
  • ದುಬೈ: 2170 ಡಿರಾಮ್ (48,454 ರುಪಾಯಿ)
  • ಅಮೆರಿಕ: 595 ಡಾಲರ್ (48,834 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (49,404 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (50,345 ರೂ)
  • ಓಮನ್: 236 ಒಮಾನಿ ರಿಯಾಲ್ (50,348 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,505 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,650 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,650 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More