ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಇಳಿಕೆಯ ಹಾದಿಯಲ್ಲಿ ಮುಂದುವರಿದಿವೆ. ಅಮೆರಿಕ, ದುಬೈನಲ್ಲಿ ಚಿನ್ನದ ಬೆಲೆ 49,000 ರೂ ಒಳಗೆ ಬಂದಿವೆ. ಸಿಂಗಾಪುರ, ಕುವೇತ್ನಲ್ಲಿ ಬೆಲೆ 49 ಸಾವಿರ ರೂ ಒಳಗಿದೆ. ಭಾರತದಲ್ಲಿ ಎಲ್ಲೆಡೆ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಳಿಕೆ ಆಗಿವೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಭರ್ಜರಿಯಾಗಿ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,200 ರುಪಾಯಿಯಲ್ಲಿ ಇದೆ.
ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Record Bonus: ಪಾಲಿಸಿದಾರರಿಗೆ 1,183 ಕೋಟಿ ರೂ ಮೊತ್ತದ ಬೋನಸ್ ಘೋಷಿಸಿದ ಟಾಟಾ ಎಐಎ ಲೈಫ್ ಇನ್ಷೂರೆನ್ಸ್
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: EPF Claim: ಉದ್ಯೋಗಿ ಸತ್ತಾಗ ಅವರ ಇಪಿಎಫ್ ಹಣಕ್ಕೆ ನಾಮಿನಿ ಕ್ಲೈಮ್ ಮಾಡುವುದು ಹೇಗೆ?
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ