AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 24 June: ಚಿನ್ನದ ಬೆಲೆ ಎಲ್ಲೆಡೆ ಮತ್ತೆ ಕುಸಿತ; ಬೆಂಗಳೂರು ಸೇರಿದಂತೆ ವಿವಿಧೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ರೇಟು, ಇಲ್ಲಿದೆ ಡೀಟೇಲ್ಸ್

Bullion Market 2023, June 24th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 71.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 24 June: ಚಿನ್ನದ ಬೆಲೆ ಎಲ್ಲೆಡೆ ಮತ್ತೆ ಕುಸಿತ; ಬೆಂಗಳೂರು ಸೇರಿದಂತೆ ವಿವಿಧೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ರೇಟು, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 24, 2023 | 5:14 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Prices) ಮತ್ತೆ ಭರ್ಜರಿಯಾಗಿ ಇಳಿದಿದೆ. ಅಮೆರಿಕ, ಯುಎಇ, ಸಿಂಗಾಪುರ ಇತ್ಯಾದಿ ಬಹುತೇಕ ವಿದೇಶಗಳಲ್ಲಿ ಚಿನ್ನದ ಬೆಲೆ 50,000 ರೂ ಒಳಗಿದೆ. ಭಾರತದಲ್ಲೂ ಚಿನ್ನದ ಬೆಲೆ ಗಮನಾರ್ಹವಾಗಿ ಇಳಿದಿದೆ. ಬೆಳ್ಳಿ ಬೆಲೆಯೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,075 ರುಪಾಯಿಯಲ್ಲಿ ಇದೆ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿArecanut Price 23 June: ಇಂದಿನ ಅಡಿಕೆ ಧಾರಣೆ, ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರ ಹೀಗಿದೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 707.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,100 ರೂ
  • ಚೆನ್ನೈ: 54,450 ರೂ
  • ಮುಂಬೈ: 54,100 ರೂ
  • ದೆಹಲಿ: 54,250 ರೂ
  • ಕೋಲ್ಕತಾ: 54,100 ರೂ
  • ಕೇರಳ: 54,100 ರೂ
  • ಅಹ್ಮದಾಬಾದ್: 54,100 ರೂ
  • ಜೈಪುರ್: 54,250 ರೂ
  • ಲಕ್ನೋ: 54,250 ರೂ
  • ಭುವನೇಶ್ವರ್: 54,100 ರೂ

ಇದನ್ನೂ ಓದಿElectricity Tariff Rules: ದಿನದ ಬೇರೆ ಬೇರೆ ಹೊತ್ತಿನಲ್ಲಿ ವಿದ್ಯುತ್ ಬಳಕೆಗೆ ಬೇರೆ ಬೇರೆ ದರ ಅನ್ವಯ: ಹೊಸ ಮಾದರಿ ಬಿಲ್ ವ್ಯವಸ್ಥೆಗೆ ಕೇಂದ್ರ ಕ್ರಮ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,122 ರುಪಾಯಿ)
  • ದುಬೈ: 2152.50 ಡಿರಾಮ್ (48,032 ರುಪಾಯಿ)
  • ಅಮೆರಿಕ: 590 ಡಾಲರ್ (48,401 ರುಪಾಯಿ)
  • ಸಿಂಗಾಪುರ: 802 ಸಿಂಗಾಪುರ್ ಡಾಲರ್ (48,641 ರುಪಾಯಿ)
  • ಕತಾರ್: 2,220 ಕತಾರಿ ರಿಯಾಲ್ (49,968 ರೂ)
  • ಓಮನ್: 235.50 ಒಮಾನಿ ರಿಯಾಲ್ (50,124 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,503 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,075 ರೂ
  • ಚೆನ್ನೈ: 7,400 ರೂ
  • ಮುಂಬೈ: 7,150 ರೂ
  • ದೆಹಲಿ: 7,150 ರೂ
  • ಕೋಲ್ಕತಾ: 7,150 ರೂ
  • ಕೇರಳ: 7,400 ರೂ
  • ಅಹ್ಮದಾಬಾದ್: 7,150 ರೂ
  • ಜೈಪುರ್: 7,150 ರೂ
  • ಲಕ್ನೋ: 7,150 ರೂ
  • ಭುವನೇಶ್ವರ್: 7,400 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು