AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 25th June: ತುಸು ತಗ್ಗಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 25th: ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,115 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25th June: ತುಸು ತಗ್ಗಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 25, 2024 | 5:00 AM

Share

ಬೆಂಗಳೂರು, ಜೂನ್ 25: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 25 ಪೈಸೆ ಕಡಿಮೆ ಆಗಿದೆ. ವಿದೇಶ ಮಾರುಕಟ್ಟೆಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,115 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 917 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 911.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,250 ರೂ
  • ಚೆನ್ನೈ: 67,000 ರೂ
  • ಮುಂಬೈ: 66,250 ರೂ
  • ದೆಹಲಿ: 66,400 ರೂ
  • ಕೋಲ್ಕತಾ: 66,250 ರೂ
  • ಕೇರಳ: 66,240 ರೂ
  • ಅಹ್ಮದಾಬಾದ್: 66,300 ರೂ
  • ಜೈಪುರ್: 66,400 ರೂ
  • ಲಕ್ನೋ: 66,400 ರೂ
  • ಭುವನೇಶ್ವರ್: 66,250 ರೂ

ಇದನ್ನೂ ಓದಿ: 53ನೇ ಜಿಎಸ್​ಟಿ ಕೌನ್ಸಿಲ್ ಸಭೆ ಮುಖ್ಯಾಂಶಗಳು; ಬದಲಾದ ತೆರಿಗೆಗಳ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,470 ರಿಂಗಿಟ್ (61,500 ರುಪಾಯಿ)
  • ದುಬೈ: 2,607.50 ಡಿರಾಮ್ (59,270 ರುಪಾಯಿ)
  • ಅಮೆರಿಕ: 710 ಡಾಲರ್ (59,280 ರುಪಾಯಿ)
  • ಸಿಂಗಾಪುರ: 982 ಸಿಂಗಾಪುರ್ ಡಾಲರ್ (60,590 ರುಪಾಯಿ)
  • ಕತಾರ್: 2,650 ಕತಾರಿ ರಿಯಾಲ್ (60,700 ರೂ)
  • ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,430 ರುಪಾಯಿ)
  • ಓಮನ್: 278 ಒಮಾನಿ ರಿಯಾಲ್ (60,290 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,890 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,115 ರೂ
  • ಚೆನ್ನೈ: 9,620 ರೂ
  • ಮುಂಬೈ: 9,115 ರೂ
  • ದೆಹಲಿ: 9,115 ರೂ
  • ಕೋಲ್ಕತಾ: 9,115 ರೂ
  • ಕೇರಳ: 9,620 ರೂ
  • ಅಹ್ಮದಾಬಾದ್: 9,115 ರೂ
  • ಜೈಪುರ್: 9,115 ರೂ
  • ಲಕ್ನೋ: 9,115 ರೂ
  • ಭುವನೇಶ್ವರ್: 9,620 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More