ಬೆಂಗಳೂರು: ಕಳೆದ ವಾರ ಬಹುತೇಕ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ಏರಿಕೆ ಕಂಡಿತ್ತು. ಆದರೆ ಬೆಳ್ಳಿ ಮಾತ್ರ ಸತತ ಇಳಿಕೆಯ ಹಾದಿಯಿಂದ ಬದಿಗೆ ಸರಿದಿಲ್ಲ. ಅಮೆರಿಕ, ಯುಎಇ, ಸಿಂಗಾಪುರ ಇತ್ಯಾದಿ ಬಹುತೇಕ ವಿದೇಶಗಳಲ್ಲಿ ಚಿನ್ನದ ಬೆಲೆ ತುಸು ಏರಿಕೆಯಾಗಿದ್ದರೂ ದರ 50,000 ರೂ ಒಳಗಿದೆ. ಭಾರತದಲ್ಲೂ ಚಿನ್ನದ ಬೆಲೆ ಗಮನಾರ್ಹವಾಗಿ ಇಳಿದಿದೆ. ಬೆಳ್ಳಿ ಬೆಲೆಯೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,090 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,025 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: EPF Withdrawal: ಉಮಂಗ್ ಆ್ಯಪ್ ಮೂಲಕ ಇಪಿಎಫ್ ಹಣ ವಿತ್ಡ್ರಾ ಮಾಡುವುದು ಬಹಳ ಸುಲಭ; ಇಲ್ಲಿದೆ ವಿವರ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ