Gold Silver Price on 27 June: ಬೆಲೆ ಏರಿಕೆ ಹಾದಿ ಹಿಡಿಯಿತಾ ಚಿನ್ನ?; ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಚಿನ್ನ ಮತ್ತು ಬೆಳ್ಳಿಯ ಇವತ್ತಿನ ಬೆಲೆಗಳು

Bullion Market 2023, June 27th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,280 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 70.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27 June: ಬೆಲೆ ಏರಿಕೆ ಹಾದಿ ಹಿಡಿಯಿತಾ ಚಿನ್ನ?; ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಚಿನ್ನ ಮತ್ತು ಬೆಳ್ಳಿಯ ಇವತ್ತಿನ ಬೆಲೆಗಳು
ಚಿನ್ನ

Updated on: Jun 27, 2023 | 4:53 AM

ಬೆಂಗಳೂರು: ಕಳೆದ ವಾರ ಬಹುತೇಕ ಇಳಿಕೆಯ ಹಾದಿಯಲ್ಲಿದ್ದು ವೀಕೆಂಡ್​ನಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಈ ವಾರ ಅದೇ ಗತಿಯಲ್ಲಿ ಮುಂದುವರಿದಿದೆ. ಆದರೆ ಬೆಳ್ಳಿ ಮಾತ್ರ ಏರಿಕೆಯ ಹಾದಿಗೆ ಬಂದಿಲ್ಲ. ಅಮೆರಿಕ, ಯುಎಇ, ಸಿಂಗಾಪುರ ಇತ್ಯಾದಿ ಬಹುತೇಕ ವಿದೇಶಗಳಲ್ಲಿ ಚಿನ್ನದ ಬೆಲೆ ತುಸು ಏರಿಕೆಯಾಗಿದ್ದರೂ ದರ 50,000 ರೂ ಒಳಗಿದೆ. ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪಪ್ರಮಾಣದ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,090 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,025 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 27ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 709 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 702.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,350 ರೂ
  • ಚೆನ್ನೈ: 54,700 ರೂ
  • ಮುಂಬೈ: 54,350 ರೂ
  • ದೆಹಲಿ: 54,500 ರೂ
  • ಕೋಲ್ಕತಾ: 54,350 ರೂ
  • ಕೇರಳ: 54,350 ರೂ
  • ಅಹ್ಮದಾಬಾದ್: 54,350 ರೂ
  • ಜೈಪುರ್: 54,500 ರೂ
  • ಲಕ್ನೋ: 54,500 ರೂ
  • ಭುವನೇಶ್ವರ್: 54,350 ರೂ

ಇದನ್ನೂ ಓದಿLulu in Hyderabad: ಹೈದರಾಬಾದ್​​​ನಲ್ಲಿಯೂ 3,500 ಕೋಟಿ ರೂ ಹೂಡಿಕೆಗೆ ‘ಲುಲು ಗ್ರೂಪ್’ ಒಪ್ಪಂದ, ಸೆಪ್ಟೆಂಬರ್ ತಿಂಗಳಲ್ಲಿ ಆರಂಭ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,305 ರುಪಾಯಿ)
  • ದುಬೈ: 2167.50 ಡಿರಾಮ್ (48,405 ರುಪಾಯಿ)
  • ಅಮೆರಿಕ: 590 ಡಾಲರ್ (48,389 ರುಪಾಯಿ)
  • ಸಿಂಗಾಪುರ: 809 ಸಿಂಗಾಪುರ್ ಡಾಲರ್ (49,076 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,127 ರೂ)
  • ಓಮನ್: 235.50 ಒಮಾನಿ ರಿಯಾಲ್ (50,244 ರುಪಾಯಿ)
  • ಕುವೇತ್: 184.50 ಕುವೇತಿ ದಿನಾರ್ (49,242 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,025 ರೂ
  • ಚೆನ್ನೈ: 7,450 ರೂ
  • ಮುಂಬೈ: 7,090 ರೂ
  • ದೆಹಲಿ: 7,090 ರೂ
  • ಕೋಲ್ಕತಾ: 7,090 ರೂ
  • ಕೇರಳ: 7,450 ರೂ
  • ಅಹ್ಮದಾಬಾದ್: 7,090 ರೂ
  • ಜೈಪುರ್: 7,090 ರೂ
  • ಲಕ್ನೋ: 7,090 ರೂ
  • ಭುವನೇಶ್ವರ್: 7,450 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us